ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ 22 ವರ್ಷದ ಯುವಕನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತನನ್ನು ಸಲ್ಮಾನ್​ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಕರೆ ಮಾಡಿ ಪ್ರಧಾನಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಈಶಾನ್ಯ ದೆಹಲಿಯ ಖಜೋರಿ ಖಾಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಆರೋಪಿಯ ವಿಚಾರಣೆಯನ್ನು ನಡೆಸಲಿದ್ದಾರೆ.
ಆರೋಪಿ ಸಲ್ಮಾನ್​ ವಿರುದ್ಧ ಈಗಾಗಲೇ ಅನೇಕ ಪೊಲೀಸ್​ ಪ್ರಕರಣಗಳಿದ್ದು, ಜಾಮೀನಿನ ಮೇಲೆ ಹೊರಗಿದ್ದಾನೆಂಬುದು ಪೊಲೀಸ್ ವಿಚಾರಣೆ ವೇಳೆ ತಿಳಿದುಬಂದಿದೆ. ಜೈಲಿಗೆ ವಾಪಸ್ಸು ಬರಲು ಬೆದರಿಕೆ ಕರೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.
ಕಳೆದ ಜನವರಿಯಲ್ಲೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿ ಅಮಿತ್​ ಷಾ ಮತ್ತು ಪ್ರಧಾನಿ ಮೋದಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದ. ಸಿಎಎ ಮತ್ತು ಎನ್​ಆರ್​ಸಿ ಅನುಷ್ಠಾನ ಹಿನ್ನೆಲೆಯಲ್ಲಿ ಬೆದರಿಕೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)
ರೋಹಿಣಿ ಸಿಂಧೂರಿ ವರ್ಗಾವಣೆಗೆ ಹೆಚ್ಚಿದ ಒತ್ತಡ! ಸರ್ಕಾರದ ಮುಂದಿನ ನಡೆಯ ಬಗ್ಗೆ ಭಾರೀ ಕುತೂಹಲ

ಸಹಸ್ರಕೋಟಿ ವಂಚಕ ಚೋಕ್ಸಿ ಸಿಗದೇ ಬರಿಗೈಯಲ್ಲಿ ವಾಪಸ್‌- ಆಕೆ ಗರ್ಲ್‌ಫ್ರೆಂಡ್‌ ಅಲ್ಲ, ಪತಿ ಅಂಥವರಲ್ಲ ಎಂದ ಪತ್ನಿ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು- ಹಾಗಿದ್ದರೆ ಅಂಕ ಹೇಗೆ? ಇಲ್ಲಿದೆ ನೋಡಿ ಮಾಹಿತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − one =
Remember me
