ಮುಂಬೈ:ಫ್ಲ್ಯಾಟ್​​ವೊಂದರಲ್ಲಿ ತಾಯಿ ಹಾಗೂ ಮಗನ ಶವ ಪತ್ತೆಯಾಗಿರುವ ಘಟನೆ ಮುಂಬೈನ ವಿಕ್ರೋಲಿಯಲ್ಲಿ ನಡೆದಿದೆ.
ಅಭಿಷೇಕ್ ತಾವ್ಡೆ(22) ಹಾಗೂ ಉಮಾ (54) ಎಂಬುವರ ಶವಗಳು ದೊರಕಿವೆ. ಅಭಿಷೇಕ್ ಮಲಗುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಹಾಗೂ ಆತನ ತಾಯಿಯ ಬಾಯಿಯಲ್ಲಿ ನೊರೆಯೊಂದಿಗೆ ಹಾಲ್​ನಲ್ಲಿ ಪತ್ತೆಯಾಗಿದ್ದಾರೆ.
ಇದನ್ನು ಓದಿ:ಬಿಲ್​ ಶೇರ್​ ಮಾಡುವಂತೆ ಹೇಳಿದ್ದಕ್ಕೆ ಸಿಟ್ಟು; ಜನುಮದಿನದಂದೇ ಸಿನಿಮೀಯ ಶೈಲಿಯಲ್ಲಿ ಯುವಕನ ಹತ್ಯೆ
ಅಭಿಷೇಕ್ ನಿರುದ್ಯೋಗಿಯಾಗಿದ್ದು, ಅವರ ತಾಯಿ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಅಭಿಷೇಕ್‌ನ ತಂದೆ ಬಹಳ ಹೊತ್ತಿನವರೆಗೆ ಫ್ಲ್ಯಾಟ್​​ನ ಬಾಗಿಲು ಬಡಿದಾಗ ಓಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅನುಮಾನಗೊಂಡು ಆತ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು.
ಸ್ಥಳಕ್ಕಾಗಮಿಸಿದ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಿ ಫ್ಲ್ಯಾಟ್​​ನ ಬಾಗಿಲು ಒಡೆದಾಗ ಘಟನೆ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + seventeen =
Remember me
