ಹೈದರಾಬಾದ್:ತೆಲಂಗಾಣದಲ್ಲಿ ಕರೊನಾ ಸೋಂಕು ತನ್ನ ಪ್ರಭಾವವನ್ನು ಹೆಚ್ಚಿಸುತ್ತಲೇ ಇದೆ. ಈ ನಡುವೆಯೇ 23 ಪತ್ರಕರ್ತರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಇಲ್ಲಿಯವರೆಗೆ 60 ಮಂದಿ ಪತ್ರಕರ್ತರು ಕರೊನಾ ಸೋಂಕಿನಿಂದ ಪೀಡಿತರಾಗಿರುವುದಾಗಿ ವರದಿಯಾಗಿದೆ.
ಅನೇಕ ವರದಿಗಾರರು ವರದಿ ಮಾಡಲು ಬೇರೆ ಬೇರೆ ಸ್ಥಳಗಳಿಗೆ ಹೋಗುವ ಹಿನ್ನೆಲೆಯಲ್ಲಿ ಹಾಗೂ ಕರೊನಾ ಬಿಕ್ಕಟ್ಟಿನ ಸಮಯದಲ್ಲಿ ಅನೇಕ ಪತ್ರಕರ್ತರು ಸೋಂಕಿತರ ಪ್ರದೇಶಗಳಿಗೆ ಹೋಗುತ್ತಿರುವ ಕಾರಣದಿಂದಾಗಿ ಎಲ್ಲಾ ಮಾಧ್ಯಮಗಳ ಪತ್ರಕರ್ತರಿಗೆ ಕಡ್ಡಾಯವಾಗಿ ಕರೊನಾ ಸೋಂಕಿನ ಪರೀಕ್ಷೆ ಮಾಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿಯೂ ಪರೀಕ್ಷೆ ಮಾಡಿಸಲಾಗಿದೆ. ಮೊನ್ನೆ ಮತ್ತೆ 140 ಮಂದಿ ಪತ್ರಕರ್ತರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಆ ಪೈಕಿ 23 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ತೆಲಂಗಾಣ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ:ಕರೊನಾ ವೈರಸ್​ಗೆ ದೇವರ ಪಟ್ಟ:​ ನಡೆಯುತ್ತಿದೆ ನಿತ್ಯಪೂಜೆ!
ನಿನ್ನೆಯವರೆಗೆ ತೆಲಂಗಾಣದಲ್ಲಿ 237 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ತೆಲಂಗಾಣ ರಾಜ್ಯದಲ್ಲಿ 4,974 ಪ್ರಕರಣಗಳಿವೆ, ಅದರಲ್ಲಿ 2,377 ಮಂದಿ ಗುಣಮುಖರಾಗಿದ್ದಾರೆ. 2,412 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 185 ಮಂದಿ ಇಲ್ಲಿಯವರೆಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಹೈದರಾಬಾದಿನಲ್ಲಿ 50 ಸಾವಿರ ಮಂದಿಗೆ ಕರೊನಾ ಸೋಂಕು ಪರೀಕ್ಷೆ ಮಾಡಿಸಲಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮಾಹಿತಿ ನೀಡಿದ್ದಾರೆ. ಒಟ್ಟು 10 ದಿನಗಳಲ್ಲಿ ಈ ಐವತ್ತು ಸಾವಿರ ಜನರಿಗೆ ಪರೀಕ್ಷೆ ನಡೆಯಲಿದೆ. ಇನ್ನು ದೆಹಲಿಯಲ್ಲಿ ಕೊರೊನಾ ಸೋಂಕಿತರಿಗಾಗಿಯೇ 20 ಸಾವಿರ ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಸೂಚನೆ ನೀಡಿದೆ.(ಏಜೆನ್ಸೀಸ್​)
ಭಗವದ್ಗೀತೆ, ಕರ್ಮಯೋಗದ ಮಹತ್ವ ಹೇಳಿಕೊಡುತ್ತಿದ್ದಾರೆ ಅಮೆರಿಕ ಸಂಸದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + fourteen =
Remember me
