ಲಖನೌ:ವಲಸೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಟ್ರಕ್​ ಉತ್ತರಪ್ರದೇಶದ ಔರೈಯಾ ಎಂಬಲ್ಲಿ ಮತ್ತೊಂದು ಟ್ರಕ್​ಗೆ ಡಿಕ್ಕಿಯಾಗಿ 23 ಜನರು ಮೃತಪಟ್ಟಿದ್ದಾರೆ. 15ಕ್ಕೂ ಅಧಿಕ ಜನರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, 20 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಲಸೆ ಕಾರ್ಮಿಕರು ಬಿಹಾರ್​, ಜಾರ್ಖಂಡ್​, ಪಶ್ಚಿಮ ಬಂಗಾಳಕ್ಕೆ ಸೇರಿದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿಷೇಕ್​ ಸಿಂಗ್​ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ;ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರ್ಮಿಕರ ಮೇಲೆ ಹರಿದ ಬಸ್​, ಪ್ರತ್ಯೇಕ ಪ್ರಕರಣದಲ್ಲಿ 14 ಜನರ ಸಾವು
ವಲಸೆ ಕಾರ್ಮಿಕರಿದ್ದ ಟ್ರಕ್​ ರಾಜಸ್ಥಾನದಿಂದ ಬರುತ್ತಿತ್ತು. ಬೆಳನ ಜಾವ 3.30ರಲ್ಲಿ ಅಪಘಾತ ಸಂಭವಿಸಿದೆ. ಮೂರು ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟ್ರಕ್​ ಅಪಘಾತಕ್ಕೀಡಾದ ಎರಡನೇ ಪ್ರಕರಣ ಇದಾಗಿದೆ. ಮುಜಫ್ಫರನಗರದಲ್ಲೂ ಟ್ರಕ್​ ಮುಖಾಮುಖಿ ಡಿಕ್ಕಿಯಾಗಿ 8 ಜನರು ಮೃತಪಟ್ಟಿದ್ದರು.
ದೇಶಾದ್ಯಂತ ಲಾಕ್​ಡೌನ್​ನಿಂದಾಗಿ ಉದ್ಯೋಗ ಕಳೆದುಕೊಂಡಿರುವ ಕಾರ್ಮಿಕರು ಕಾಲ್ನಡಿಗೆಯಲ್ಲಿ ಅಥವಾ ಟ್ರಕ್​, ಲಾರಿಗಳನ್ನು ಏರಿ ತಮ್ಮೂರುಗಳಿಗೆ ತೆರಳುತ್ತಿದ್ದಾರೆ.
ನಂಜನಗೂಡಿನಲ್ಲಿ ತಯಾರಾಗಲಿದೆ ಕರೊನಾಗೆ ಔಷಧ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
