ಕೊಲ್ಕತ್ತಾ, ಪಶ್ಚಿಮ ಬಂಗಾಳ:ಐಸಿಸಿ ವಿಶ್ವಕಪ್​ 2023ರ ಫೈನಲ್​ನ​ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟೀಮ್​ ಇಂಡಿಯಾ ಕಂಡ ಸೋಲನ್ನು ಸಹಿಸಲಾಗದೆ ಮನನೊಂದ 23 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:IND vs AUS 5-T20I: ಟೀಂ ಇಂಡಿಯಾ ನಾಯಕತ್ವಕ್ಕೆ ಸೂರ್ಯಕುಮಾರ್ ಯಾದವ್!; ರೋಹಿತ್-ವಿರಾಟ್​ಗೆ ರೆಸ್ಟ್?​
ಬಂಕುರಾದ ಬೆಲಿಯತೋರ್ ಸಿನಿಮಾ ಹಾಲ್ ಬಳಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿದೆ. ಘಟನೆ ಇದೀಗ ಬೆಳಕಿಗೆ ಬಂದಿದ್ದು, ಮೃತ ಯುವಕನನ್ನು ರಾಹುಲ್ ಲೋಹರ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ‘ಕ್ರಿಕೆಟ್ ಹುಚ್ಚ’ ಎಂದು ಕರೆಯಲ್ಪಡುವ ರಾಹುಲ್, ಫೈನಲ್ ಪಂದ್ಯ ವೀಕ್ಷಿಸಲು ಕೆಲಸದಿಂದ ರಜೆ ತೆಗೆದುಕೊಂಡಿದ್ದರು ಎನ್ನಲಾಗಿದೆ.
ಫೈನಲ್​ ಪಂದ್ಯದಲ್ಲಿ ಟೀಮ್​ ಇಂಡಿಯಾ ಸೋಲನ್ನು ಅನುಭವಿಸಿದ ನಂತರ ಈ ಬೇಸರವನ್ನು ತಾಳಲಾರದೆ, ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ಘಟನೆಯ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ” ಎಂದು ಮೃತ ಲೋಹರ್ ಅಳಿಯ ಬಾಬು ಉತ್ತಮ್ ಸುರ್ ತಿಳಿಸಿದ್ದಾರೆ. ಮಾಹಿತಿಯ ಮೇರೆಗೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಲೋಹರ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಇದನ್ನೂ ಓದಿ:ಐಸಿಸಿ ಏಕದಿನ ವಿಶ್ವಕಪ್ ತಂಡಕ್ಕೆ ರೋಹಿತ್ ನಾಯಕ: ವಿರಾಟ್ ಕೊಹ್ಲಿ ಆರು ಭಾರತೀಯ ಆಟಗಾರರಿಗೆ ಸ್ಥಾನ, ಆಸೀಸ್‌ನ ಇಬ್ಬರು ಮಾತ್ರ ಆಯ್ಕೆ
ಘಟನೆಯ ಕುರಿತು ಮಾತನಾಡಿದ ಬಂಕುರಾದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ದೋರ್ಜಿ, “ತನಿಖೆ ಮುಗಿಯುವವರೆಗೆ ವಿಷಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಸದ್ಯ ತನಿಖೆ ಮುಂದುವರೆದಿದೆ. ಈ ಮಧ್ಯೆ ಇದನ್ನು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸರು ಮತ್ತು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಿದ್ದಾರೆ” ಎಂದು ಹೇಳಿದರು,(ಏಜೆನ್ಸೀಸ್).
ಈ ದೇಶಗಳಲ್ಲಿ ಮೆಗಾಸ್ಟಾರ್ ಸಿನಿಮಾಗೆ ನಿಷೇಧ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − five =
Remember me
