ಮುಂಬೈ:ತನ್ನ ತಾಯಿಯ ಜೊತೆ ಲಿವ್​-ಇನ್​-ರಿಲೇಷನ್​ಶಿಪ್ನಲ್ಲಿದ್ದ ಪ್ರಿಯಕರನನ್ನು ಆಕೆಯ ಮಗ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪಾಲ್​ಘರ್​ ಜಿಲ್ಲೆಯಲ್ಲಿ ನಡೆದಿದ್ದು ಆರೋಪಿ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಪಾಲ್​ಘರ್​ನ ವೀರೇಂದ್ರ ನಗರದಲ್ಲಿ ಘಟನೆ ನಡೆದಿದ್ದು ಜೀವನೋಪಾಯಕ್ಕೆ ತರಕಾರಿ ಮಾರಾಟ ಮಾಡುತ್ತಿದ್ದ ಮಹಿಳೆ ಪ್ರಿಯಕರನ ಜೊತೆ ಕಳೆದ ನಾಲ್ಕು ವರ್ಷಗಳಿಂದ ಲಿವ್​-ಇನ್​-ರಿಲೇಷನ್​ಶಿಪ್​ನಲ್ಲಿದ್ದರು.
ಇದನ್ನೂ ಓದಿ:ಹೊಲದಲ್ಲಿ ಮಾವಿನಕಾಯಿ ಕಿತ್ತಿದ್ದಕ್ಕೆ ವ್ಯಕ್ತಿಯ ಹತ್ಯೆ; ಆರೋಪಿಗಳು ಪರಾರಿ
ಜೋಡಿಗಳ ನಡುವೆ ಆಗಾಗ ಮನಸ್ತಾಪ ಉಂಟಾಗಿ ಗಲಾಟೆಯಾಗುತ್ತಿತ್ತು. ಈ ವೇಳೆ ಮಹಿಳೆ ಹಾಗೂ ಪ್ರಿಯಕರನ ನಡುವೆ ಹೊಡೆದಾಟವಾಗುತ್ತಿತ್ತು ಎಂದು ತಿಳಿದು ಬಂದಿದೆ.
ಗುರುವಾರ ಸಂಜೆ ಇಬ್ಬರ ನಡುವೆ ಜಗಳ ಶುರುವಾಗಿದ್ದು ಈ ವೇಳೆ ಮಹಿಳೆಯ ಪ್ರಿಯಕರ ಆಕೆಯ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ.
ಈ ವೇಳೆ ಗಲಾಟೆಯ ವಿಚಾರ ತಿಳಿದು ಸ್ಥಳಕ್ಕೆ ಬಂದ ಮಹಿಳೆಯ ಮಗ ಆಕೆಯ ಮೇಲೆ ಹಲ್ಲೆ ನಡೆಸಲು ಮುಂದಾದ ವ್ಯಕ್ತಿಯ ತಲೆಗೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವ ಆದ ಕಾರಣ ವ್ಯಕ್ತಿ ಸಾವಿಗೀಡಾಗಿದ್ದಾರೆ.
ಘಟನೆ ಸಂಬಂಧ 46ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಭಾರತ ದಂಡ ಸಂಹಿತೆ(IPC Section)302 ಅಡಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
