ಒಡಿಶಾ:ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯಕ್ಕೆ ಸಾವಿನ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. ಅವಘಡದಲ್ಲಿ ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಶುಕ್ರವಾರ ಸಂಜೆ ಹಳಿತಪ್ಪಿದ್ದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಘಟಿಸಿದೆ. ಮೂರನೇ ಸರಕು ಸಾಗಣೆ ರೈಲು ಕೂಡ ಈ ಅಪಘಾತದಲ್ಲಿ ಸಿಲುಕಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.ಇದನ್ನೂ ಓದಿ:ಸಾರ್ವಜನಿಕರಿಗೆ ಶುಭ ಸುದ್ದಿ: ಅಡುಗೆ ಎಣ್ಣೆ ಬೆಲೆ ಶೀಘ್ರವೇ 8 ರಿಂದ 12 ರೂ.ಇಳಿಕೆ
ಪಶ್ಚಿಮ ಬಂಗಾಳದ ಹೌರಾ ನಗರದಿಂದ ತಮಿಳುನಾಡಿನ ಚೆನ್ನೈಗೆ ತೆರಳುತ್ತಿದ್ದ ಕೊರಮಂಡಲ್​​ ಎಕ್ಸ್​ಪ್ರೆಸ್​ ರೈಲಿನ ಕೆಲವು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದವು. ಈ ವೇಳೆ ಮತ್ತೊಂದು ಕಡೆಯಿಂದ ಬರುತ್ತಿದ್ದ ಯಶವಂತಪುರ-ಹೌರಾ ಸೂಪರ್​ಪಾಸ್ಟ್​ ಟ್ರೈನ್​ ಹಳಿಗಳ ಮೇಲೆ ಬಿದ್ದಿದ್ದ ಕೋರಮಂಡಲ್​ ಎಕ್ಸ್​ಪ್ರೆಸ್​ ಟ್ರೈನ್​ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಬ್​ ಶರ್ಮ ಅವರು ತಿಳಿಸಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್​)ಯ 3 ಘಟಕ, ಒಡಿಶಾದ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಒಡಿಆರ್​ಎಫ್​)ಯ 4 ಘಟಕ, 15ಕ್ಕೂ ಹೆಚ್ಚು ಅಗ್ನಿಶಾಮಕ ತಂಡ, 30ಕ್ಕೂ ಹೆಚ್ಚು ವೈದ್ಯರು, 200ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ಮತ್ತು 60ಕ್ಕೂ ಹೆಚ್ಚು ಆಂಬ್ಯುಲೆನ್ಸ್​ಗಳು ಸ್ಥಳದಲ್ಲಿ ಬೀಡುಬಿಟ್ಟಿರುವುದಾಗಿ ಒಡಿಶಾ ಸರ್ಕಾರದ ಮುಖ್ಯಕಾರ್ಯದರ್ಶಿ ಪ್ರದೀಪ್​ ಜೆನಾ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಒಡಿಶಾ ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ಒಂದು ದಿನದ ಶೋಕಾಚರಣೆಯನ್ನು ಘೋಷಣೆ ಮಾಡಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಕಂಟ್ರೋಲ್​ ರೂಮ್​ಗೆ ಧಾವಿಸಿ, ಅಪಘಾತ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಿದರು. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ವಾಯುಪಡೆಯನ್ನು ಕರೆಸಲಾಗಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಒಡಿಶಾದ ರೈಲು ದುರಂತ ಘಟನಾ ಸ್ಥಳಕ್ಕೆ ಧಾವಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಮತ್ತು ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಭುವನೇಶ್ವರ ಮತ್ತು ಕೋಲ್ಕತ್ತಾದಿಂದ ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಎನ್‌ಡಿಆರ್‌ಎಫ್, ರಾಜ್ಯ ಸರ್ಕಾರದ ತಂಡಗಳು ಮತ್ತು ವಾಯುಪಡೆ ಕೂಡ ಸಜ್ಜುಗೊಂಡಿದೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಟ್ವೀಟ್​ ಮೂಲಕ ಅಶ್ವಿನಿ ವೈಷ್ಣವ್ ತಿಳಿಸಿದರು.ಇದನ್ನೂ ಓದಿ:ರೈಲು ದುರಂತಕ್ಕೆ ಮಿಡಿದ ಜನರ ಹೃದಯ; ರಕ್ತದಾನಕ್ಕೆ ಹರಿದು ಬಂತು ಜನಸಾಗರ!
ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50,000 ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ್ದಾರೆ.
ರೈಲು ದುರಂತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದಿಂದ ಆಘಾತಕ್ಕೆ ಒಳಗಾಗಿದ್ದೇನೆ ಮತ್ತು ತೀವ್ರವಾಗಿ ನೊಂದಿದ್ದೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಸ್ಥಳದಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಒಡಿಶಾ ರೈಲು ದುರಂತ: ಭಾರತ ಇತಿಹಾಸದಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತಗಳ ಚಿತ್ರಣ ಇಲ್ಲಿದೆ…

ಒಡಿಶಾ ರೈಲು ದುರಂತ: 18 ರೈಲುಗಳ ಸಂಚಾರ ರದ್ದು, ಏಳು ರೈಲುಗಳ ಮಾರ್ಗ ಬದಲಾವಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 2 =
Remember me
