ಮಹಾರಾಷ್ಟ್ರ:ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ ಭಯದ ವಾತಾವರಣದಲ್ಲಿ ಹಿಂದೂಗಳು ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ
ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ 24 ಜನರ ಸಾವಿಗೆ ಔಷಧಿ ಕೊರತೆಯೇ ಕಾರಣ ಎಂದು ಸೋಮವಾರ (ಅ.2) ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಆರು ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ. ಹೆಚ್ಚಾಗಿ ಹಾವು ಕಡಿತದಿಂದ ಕೆಲವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
नांदेडमध्ये सरकारी रुग्णालयात 24 तासात 12 नवजात बाळांसह 24 मृत्यू केवळ राज्य सरकारकडून औषध पुरवठा झाला नाही.सण उत्सव आणि इव्हेंट बाजी जाहिरात बाजी करणाऱ्या सरकारचा धिक्कार असो.@mieknathshinde@AjitPawarSpeaks@Dev_Fadnavis@narendramodi@NCPspeaks
— Vikas Lawande (@VikasLawande1)October 2, 2023

ಘಟನೆಗೆ ಪ್ರತಿಕ್ರಿಯಿಸಿದ ಸಿಎಂ ಏಕನಾಥ್​ ಶಿಂಧೆ, “ಈ ಸಾವುಗಳು ದುರದೃಷ್ಟಕರ, ಆಸ್ಪತ್ರೆಯಲ್ಲಿ ಏನಾಯಿತು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು” ಎಂದು ಮುಂಬೈನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ:ಗ್ರಾಮ ಸ್ವರಾಜ್ಯ ಬಲಪಡಿಸಿದರೆ ಆರ್ಥಿಕ ಸ್ವಾವಲಂಬನೆ: ನಾಗೇಶ ಹೆಗಡೆ
“ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ಸಾವುಗಳು ಔಷಧಿ ಪೂರೈಕೆಯ ಕೊರತೆಯಿಂದ ಮಾತ್ರವಲ್ಲ. ಹಬ್ಬಗಳು ಮತ್ತು ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ವಕ್ತಾರ ವಿಕಾಸ್ ಲಾವಾಂಡೆ ಟ್ವೀಟ್​ ಮಾಡಿದ್ದಾರೆ,(ಏಜೆನ್ಸೀಸ್).
ಬಹುನಿರೀಕ್ಷಿತ ‘ಲಿಯೋ’ ಟ್ರೇಲರ್​ಗೆ ದಿನಗಣನೆ; ದಳಪತಿ ವಿಜಯ್​ ಫ್ಯಾನ್ಸ್​ಗಳಲ್ಲಿ ಹೆಚ್ಚಾಯ್ತು ಕಾತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − ten =
Remember me
