ನವದೆಹಲಿ:ಹಾಲಿ ಮತ್ತು ಮಾಜಿ ಯೋಧರಿಗೆ ಕರೊನಾ ಸೋಂಕು ತಗುಲಿದೆ. ಇವರೆಲ್ಲರೂ ದೆಹಲಿಯ ಸೇನಾಪಡೆ ಸಂಶೋಧನೆ ಮತ್ತು ರೆಫೆರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಟ್ಟು 24 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ಖಚಿತವಾಯಿತು. ತಕ್ಷಣವೇ ಅವರೆಲ್ಲರನ್ನೂ ಬೇಸ್​ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾಪಡೆ ಮೂಲಗಳು ತಿಳಿಸಿವೆ.
ಇವರೆಲ್ಲರೂ ದೆಹಲಿಯ ಕಂಟೋನ್ಮೆಂಟ್​ ಏರಿಯಾದಲ್ಲಿ ವಾಸವಾಗಿದ್ದರು. ಸೇನಾಪಡೆ ಆಸ್ಪತ್ರೆಯ ಕ್ಯಾನ್ಸರ್​ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರೆಲ್ಲರನ್ನೂ ತಕ್ಷಣವೇ ಐಸೋಲೇಷನ್​ ವಾರ್ಡ್​ಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಆಸ್ಪತ್ರೆಯ ಸಿಬ್ಬಂದಿಗೆ ಯಾರಿಗೂ ಸೋಂಕು ತಗುಲಿಲ್ಲ ಎಂಬುದು ಖಚಿತವಾಗಿರುವುದಾಗಿ ಸೇನಾಪಡೆ ಮೂಲಗಳು ಹೇಳಿವೆ.
ಇದನ್ನೂ ಓದಿ:ದೆಹಲಿಯಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿನ ವ್ಯಾಟ್​ ದರ ಹೆಚ್ಚಳ
ಭಾರತೀಯ ಸೇನಾಪಡೆಯಲ್ಲಿ ಮಾರ್ಚ್​ನಲ್ಲೇ ಕೆಲ ಯೋಧರಿಗೆ ಕರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸೋಂಕಿನ ಬಗ್ಗೆ ಎಚ್ಚರದಿಂದ ಇರುವಂತೆ ಸೇನಾಪಡೆ ಅಧಿಕಾರಿಗಳು ಸೇನೆಯ ಎಲ್ಲ ಘಟಕಗಳಿಗೂ ಸೂಚನೆ ನೀಡಿತ್ತು.
ಜಮ್ಮು ಮತ್ತು ಕಾಶ್ಮೀರದ ಮೂವರು ಛಾಯಾಗ್ರಾಹಕರಿಗೆ ಪುಲಿಟ್ಜರ್​ ಪ್ರಶಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 18 =
Remember me
