ಮುಂಬೈ:ನೂರಾರು ಕನಸುಗಳನ್ನು ಹೊತ್ತು ಮುಂಬೈಗೆ ಬಂದಿದ್ದ 24 ವರ್ಷದ ಗಗನಸಖಿಯೊಬ್ಬರು ಮುಂಬೈನ ಫ್ಲಾಟ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಮೃತರನ್ನು ರೂಪಲ್ ಓಗ್ರೆ(24) ಎಂದು ಗುರುತಿಸಲಾಗಿದ್ದು, ಛತ್ತೀಸ್‌ಗಢ ಮೂಲದವಳಾಗಿದ್ದಾಳೆ. ಎರ್​ ಇಂಡಿಯಾ ತರಬೇತಿಗಾಗಿ ಏಪ್ರಿಲ್​​ನಲ್ಲಿ ಮುಂಬೈಗೆ ಬಂದಿದ್ದಳು ಎಂದು ಆಧಿಕಾರಿಗಳು ತಿಳಿಸಿದ್ದಾರೆ. ಮುಂಬೈನ ಅಂಧೇರಿ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಏರ್ ಇಂಡಿಯಾದಲ್ಲಿ ತರಬೇತಿಗಾಗಿ ಮುಂಬೈಗೆ ಬಂದಿದ್ದ ಯುವತಿ ತನ್ನ ಸಹೋದರಿ ಮತ್ತು ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದಳು. ಯುವತಿ ಕರೆ ಸ್ವೀಕರಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮುಂಬೈನಲ್ಲಿರುವ ತಮ್ಮ ಸ್ಥಳೀಯ ಸ್ನೇಹಿತರಿಗೆ ಕರೆ ಮಾಡಿ ತಮ್ಮ ಫ್ಲಾಟ್‌ಗೆ ಹೋಗುವಂತೆ ಹೇಳಿದರು. ಕುಟುಂಬದ ಸ್ಥಳೀಯ ಸ್ನೇಹಿತರು ಅಲ್ಲಿಗೆ ಹೋದಾಗ, ಫ್ಲಾಟ್ ಒಳಗಿನಿಂದ ಬೀಗ ಹಾಕಿರುವುದನ್ನು ಕಂಡು ಡೋರ್‌ಬೆಲ್‌ಗೆ ಮಾಡಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ, ಪೊಲೀಸರನ್ನು ಸಂಪರ್ಕಿಸಿದ್ದಾರೆ. ನಕಲಿ ಕೀ ಬಳಸಿ ಬಾಗಿಲು ತೆರೆದಾಗ ಯುವತಿ ಕುತ್ತಿಗೆ ಸೀಳಿ ಬಿದ್ದಿರುವುದು ಪತ್ತೆಯಾಗಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಕೆಲ ದಿನಗಳ ಹಿಂದೆ ಸಹೋದರಿ ಹಾಗೂ ಆಕೆಯ ಬಾಯ್‌ಫ್ರೆಂಡ್  ತಮ್ಮ ಹುಟ್ಟೂರಿಗೆ ತೆರಳಿದ್ದಳು. ಮನೆಯಲ್ಲಿ ಒಬ್ಬಳೇ ಇದ್ದ ರೂಪಾಲ್ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜವಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದು, ಮತ್ತು ಅಪರಾಧಿಯನ್ನು ಬಂಧಿಸಲು ಭಾರತ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.ಅಪಾರ್ಟ್‌ಮೆಂಟ್‌ನಲ್ಲಿರುವ ಸಂತ್ರಸ್ತೆಯ ನೆರೆಹೊರೆಯವರಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.
68ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ವಕೀಲ ಹರೀಶ್‌ ಸಾಳ್ವೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 6 =
Remember me
