ನವದೆಹಲಿ :ದೇಶದಲ್ಲಿ ಕರೊನಾ ರೋಗಿಗಳ ಚಿಕಿತ್ಸೆಯಲ್ಲಿ ಬಳಸಲಾಗುವ ರೆಮ್ಡೆಸಿವಿರ್​ ಇಂಜೆಕ್ಷನ್​ಗಳ ಉತ್ಪಾದನೆಯನ್ನು ದುಪ್ಪಟ್ಟು ಪ್ರಮಾಣಕ್ಕಿಂತ ಹೆಚ್ಚಿಸಲಾಗಿದೆ. ಶೀಘ್ರದಲ್ಲೇ ದಿನವೊಂದಕ್ಕೆ 3 ಲಕ್ಷ ರೆಮ್ಡೆಸಿವಿರ್​​ನ ವಯಲ್​​ಗಳನ್ನು ಉತ್ಪಾದಿಸುವ ಸಾಮರ್ಥ್ಯ ಸಾಧಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನಸೂಖ್ ಮಾಂಡವೀಯ ಹೇಳಿದ್ದಾರೆ.
ಏಪ್ರಿಲ್ 12 ರ ನಂತರದಲ್ಲಿ ಕರೊನಾ ರೋಗಿಗಳ ಚಿಕಿತ್ಸೆಯಲ್ಲಿ ಬಳಸಲಾಗುವ ರೆಮ್ಡೆಸಿವಿರ್​ ಇಂಜೆಕ್ಷನ್​ಗಳನ್ನು ಉತ್ಪಾದಿಸಲು 25 ಹೊಸ ಉತ್ಪಾದನಾ ಘಟಕಗಳನ್ನು ಅನುಮೋದಿಸಲಾಗಿದೆ. ಈ ಮುನ್ನ ತಿಂಗಳಿಗೆ 40 ಲಕ್ಷ ವಯಲ್​ಗಳ ಉತ್ಪಾದನೆಯಾಗುತ್ತಿತ್ತು. ಅದೇ ಈಗ 90 ಲಕ್ಷಕ್ಕೂ ಹೆಚ್ಚು ವಯಲ್​ಗಳ ಉತ್ಪಾದನಾ ಸಾಮರ್ಥ್ಯ ಸೃಷ್ಟಿಸಲಾಗಿದೆ ಎಂದಿದ್ದಾರೆ.
ಕರೊನಾ ರೋಗಿಗಳಿಗೆ ಅಗತ್ಯವಾದ ಈ ಔಷಧವನ್ನು ಪೂರೈಕೆ ಮಾಡುವಲ್ಲಿ ನಾವು ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ ಎಂದು ಮಾಂಡವೀಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
