ನವದೆಹಲಿ:26/11 ಮುಂಬೈ ದಾಳಿಯ ಮಾಸ್ಟರ್​ ಮೈಂಡ್ ಹಫೀಜ್​ ಸಯೀದ್​ಗೆ 31 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ. ಇಂದು ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ಈ ತೀರ್ಪನ್ನು ನೀಡಿದೆ.
ಲಷ್ಕರ್ ಈ ತೈಬಾ ಉಗ್ರ ಸಂಘಟನೆಯ ಸಂಸ್ಥಾಪಕ ಹಫೀಜ್​ ಸಯೀದ್​ಗೆ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಆತನಿಗೆ ಸಂಬಂಧಿಸಿದ ಎಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಿದೆ. ಮಾತ್ರವಲ್ಲ ಆತ ಅನಧಿಕೃತವಾಗಿ ಕಟ್ಟಿರುವ ಮಸೀದಿ ಹಾಗೂ ಮದರಸಗಳನ್ನು ಕೂಡ ವಶಕ್ಕೆ ಪಡೆಯುವಂತೆ ಆದೇಶ ನೀಡಲಾಗಿದೆ.
70 ವರ್ಷದ ಹಫೀಜ್​ ಉಗ್ರ ಸಂಘಟನೆಗಳಿಗೆ ಹಣ ನೀಡುತ್ತಿದ್ದ ಹಲವು ಕೇಸುಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಶಿಕ್ಷೆಗಳನ್ನು ವಿಧಿಸಲಾಗಿದ್ದು, 2020ರಲ್ಲಿ ಈತನನ್ನು 15 ವರ್ಷಗಳ ಜೈಲುಶಿಕ್ಷೆಗೆ ಗುರಿ ಮಾಡಲಾಗಿತ್ತು.
ಮುಂಬೈನಲ್ಲಿ 2008ರ ನವೆಂಬರ್​ 26ರಂದು ನಡೆದು ಉಗ್ರದಾಳಿಯಲ್ಲಿ 166 ಮಂದಿ ಸಾವಿಗೀಡಾಗಿದ್ದು, 238 ಜನರು ಗಾಯಗೊಂಡಿದ್ದರು. ಹಫೀಜ್ ಸಯೀದ್​ನನ್ನು 2019ರಲ್ಲಿ ಬಂಧಿಸಲಾಗಿತ್ತು. ಅದಕ್ಕೂ ಮೊದಲು 2001ರಿಂದ ಒಟ್ಟು 8 ಸಲ ಹಫೀಜ್​ನನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. (ಏಜೆನ್ಸೀಸ್)
ಅಡವಿಟ್ಟ ಚಿನ್ನ ಕೊಡಲ್ಲ ಎಂದ ಅಧಿಕಾರಿ; ಬ್ಯಾಂಕ್​ ಎದುರೇ ವಿಷ ಕುಡಿಯಲು ಮುಂದಾದ ರೈತ

ಭೀಕರ ಅಪಘಾತ; ಮಗುಚಿ ಬಿದ್ದ ಲಾರಿ, ಒಬ್ಬ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − four =
Remember me
