ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕಾಗಿ 264 ರಕ್ಷಣಾ ಸಿಬ್ಬಂದಿ ಪ್ರಾಣ ತ್ಯಾಗ ಮಾಡಬೇಕಾಗಿ ಬಂತು ಎಂದು ಗಡಿ ರಕ್ಷಣಾ ಪಡೆ (ಬಿಎಸ್​ಎಫ್​)ಯ ಮಹಾ ನಿರ್ದೇಶಕ ಎನ್​.ಎಸ್​.ಜಮ್ವಾಲ್​ ಹೇಳಿದರು.
ಬಿಎಸ್​ಎಫ್​ ಶಹೀದ್ ಮೆಮೋರಿಯಲ್ ಪಲೌರಾ ಕ್ಯಾಂಪ್​ನಲ್ಲಿ ಇಂದು ಹುತಾತ್ಮರಿಗೆ ಗೌರವ ಸಲ್ಲಿಸಿದ ಅವರು, ದೇಶ ರಕ್ಷಣೆ ಕಾರ್ಯದಲ್ಲಿ ಹುತಾತ್ಮರಾದವರನ್ನು ಸ್ಮರಿಸಿಕೊಂಡರು. 264 ರಕ್ಷಣಾ ಸಿಬ್ಬಂದಿ ಪೈಕಿ 25 ಯೋಧರು ಬಿಎಸ್​ಎಫ್​ನವರು. ಇವರು ಗಡಿ ಭಾಗದಲ್ಲಿ ದೇಶ ರಕ್ಷಣೆ ಕಾರ್ಯದಲ್ಲಿ ತೊಡಗಿದ್ದವರು. ಇದರ ಹೊರತಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲೂ ಬಿಎಸ್​ಎಫ್ ಯೋಧರ ಪಾತ್ರ ಪ್ರಮುಖವಾದುದು ಎಂದು ಹೇಳಿದರು.
ಇದನ್ನೂ ಓದಿ:ಬಲವಂತದ ಮತಾಂತರದಿಂದ ಹಿಂದುಗಳನ್ನು ರಕ್ಷಿಸುವಲ್ಲಿ ಪಾಕ್​ ವಿಫಲ: ಅಲ್ಲಿಯದ್ದೇ ಸಂಸದೀಯ ಸಮಿತಿಯ ವರದಿ!
ಪೊಲೀಸ್ ಹುತಾತ್ಮ ದಿನಾಚರಣೆ ಜಮ್ಮು-ಕಾಶ್ಮೀರದ ವಿವಿಧೆಡೆ ಆಯೋಜಿಸಲ್ಪಟ್ಟಿತ್ತು. ಇದೇ ದಿನ 1959ರಲ್ಲಿ ಚೀನೀ ಯೋಧರ ಜತೆಗೆ ಹೋರಾಡಿದ ಸಿಎಪಿಎಫ್​ ಯೋಧರ ಬಲಿದಾನವನ್ನೂ ಸ್ಮರಿಸಲಾಗುತ್ತಿದೆ. 1960ರಿಂದ ಈ ದಿನಾಚರಣೆ ಚಾಲ್ತಿಯಲ್ಲಿದೆ. (ಏಜೆನ್ಸೀಸ್)
ಜಮ್ಮು-ಕಾಶ್ಮೀರದ ಪಂಚಾಯತ್ ರಾಜ್ ಕಾಯ್ದೆಗೆ ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
