ನವದೆಹಲಿ:ಸಮುದ್ರದ ಗಡಿಯನ್ನು ಉಲ್ಲಂಘಿಸಿ ಅಕ್ರಮವಾಗಿ ಮೀನುಗಳ ಬೇಟೆಯಾಡಿದ ಆರೋಪದ ಮೇಲೆ ಭಾರತದ 27 ಮೀನುಗಾರರನ್ನು ಬಂಧಿಸಿರುವುದಾಗಿ ಶ್ರೀಲಂಕಾ ನೌಕಾಪಡೆ ತಿಳಿಸಿದೆ.
ಶ್ರೀಲಂಕಾದ ಈಶಾನ್ಯದಲ್ಲಿರುವ ಮನ್ನಾರ್, ಉತ್ತರದಲ್ಲಿರುವ ಡೆಲ್ಫ್ ಮತ್ತು ಕಚ್ಚತೀವು ಸಮುದ್ರ ತೀರದಲ್ಲಿ ಶನಿವಾರ ವಶಕ್ಕೆ ಪಡೆಯಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮನ್ನಾರ್​ನಲ್ಲಿ ಒಂದು ಟ್ರಾಲರ್​ ಹಾಗೂ 15 ಮಂದಿ ಮೀನುಗಾರರನ್ನು ವಶಕ್ಕೆ ಪಡೆಯಲಾಗಿದೆ. ಡೆಲ್ಫ್ ಮತ್ತು ಕಚ್ಚತೀವು ಸಮುದ್ರ ತೀರದಲ್ಲಿ ಒಂದು ಟ್ರಾಲ್​ ಹಾಗೂ 12 ಮಂದಿ ಮೀನುಗಾರರನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕಾನೂನು ಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತರನ್ನು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ ಎಂದು ನೌಕಾಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಸಿನಿಮೀಯ ಶೈಲಿಯಲ್ಲಿ ಚಿನ್ನಾಭರಣ ಕಳ್ಳಸಾಗಣೆ; ಪ್ಯಾನ್​ ಇಂಡಿಯಾ ಕಾರ್ಯಾಚರಣೆಯಲ್ಲಿ 11 ಮಂದಿ ಅರೆಸ್ಟ್
ಭಾರತ ಹಾಗೂ ಶ್ರೀಲಂಕಾದ ಸಂಬಂಧದಲ್ಲಿ ಮೀನುಗಾರರ ಬಂಧನ ವಿಚಾರ ದೊಡ್ಡ ಸಮಸ್ಯೆಯಾಗಿದ್ದು, ಲಂಕಾ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಧಿಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದಾರೆ. ಶ್ರೀಲಂಕಾದ ಸಮುದ್ರದ ಗಡಿಯನ್ನು ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪಾಕ್ ಜಲಸಂಧಿಯು ಭಾರತ ಹಾಗೂ ಶ್ರೀಲಂಕಾ ನಡುವಿನ ಜಲಗಡಿಯಾಗಿದ್ದು, ಎರಡು ದೇಶಗಳ ಮೀನುಗಾರರು ಇಲ್ಲಿ ಮೀನುಗಳನ್ನು ಹಿಡಿಯಲು ಬರುತ್ತಾರೆ. ಸಮುದ್ರದ ಗಡಿಯನ್ನು ಉಲ್ಲಂಘಿಸಿ ಮೀನುಗಳ ಬೇಟೆಯಾಡಿದ ಆರೋಪದ ಮೇಲೆ ಭಾರತದ ಮೀನುಗಾರರನ್ನು ಶ್ರೀಲಂಕಾದ ಅಧಿಕಾರಿಗಳು ಅನೇಕ ಬಾರಿ ಬಂಧಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
