ಪಾಲಕ್ಕಾಡ್​:ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಪಾಲಕ್ಕಾಡ್​ ಜಿಲ್ಲೆಯ ಆಲತ್ತೂರು ತಾಲ್ಲೂಕಿನಲ್ಲಿ ನಡೆದಿದೆ.
ಮೃತರನ್ನು ಐಶ್ವರ್ಯ(29), ಅನುಗ್ರಹ(2), ಅರುಮೋಲ್​​​(8 ತಿಂಗಳು) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಐಶ್ವರ್ಯ ಕೆಲ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ:ಕೈಕಾಲು ಕಟ್ಟಿ, ವಿವಸ್ತ್ರಗೊಳಿಸಿ ವ್ಯಕ್ತಿಯ ಭೀಕರ ಹತ್ಯೆ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆಲತ್ತೂರು ಪೊಲೀಸ್​ ಠಾಣಾಧಿಕಾರಿ ಉನ್ನಿಕೃಷ್ಣನ್​ ಮೂರು ವರ್ಷಗಳ ಹಿಂದೆ ಐಶ್ವರ್ಯಗೆ ರಂಜಿತ್​ ಎಂಬುವವರ ಜೊತೆ ವಿವಾಹವಾಗಿತ್ತು. ಐಶ್ವರ್ಯ ಮತ್ತು ಮಕ್ಕಳಿಬ್ಬರನ್ನು ಆಕೆಯ ಮಾವ ಕೆಲ ದಿನಗಳ ಹಿಂದೆ ತವರು ಮನೆಗೆ ಬಿಟ್ಟು ಬಂದಿದ್ದರು.
ಪತಿ ರಂಜಿತ್​ ಅನೇಕ ಬಾರಿ ಕರೆ ಮಾಡಿದ್ದರು ಸ್ವೀಕರಿಸದಿದ್ದಾಗ ಅನುಮಾನಗೊಂಡು ಐಶ್ವರ್ಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆಯ ಸುತ್ತ ಹುಡುಕಾಟ ನಡೆಸಿದಾಗ ಬತ್ತದ ಗದ್ದೆಯಲ್ಲಿರುವ ಬಾವಿಯೊಂದರಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಇಲಾಖೆ ಸಿಬ್ಬಂದಿ ನೆರವಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಲತ್ತೂರು ಪೊಲೀಸ್​ ಠಾಣಾಧಿಕಾರಿ ಉನ್ನಿಕೃಷ್ಣನ್ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + nine =
Remember me
