ಮಧ್ಯಪ್ರದೇಶ:ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಇಂದು ಹೆಣ್ಣು ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿದ್ದು, ಈ ಮಾಹಿತಿಯನ್ನು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧಿಕೃತವಾಗಿ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಂದಸ್ಮಿತ, ಮುಗ್ಧಮುಖದ ಬಾಲರಾಮ ತೊಟ್ಟ ಒಂದೊಂದು ಆಭರಣಕ್ಕೂ ಇದೆ ತನ್ನದೇ ಆದ ವಿಶೇಷತೆ
“ಕುನೋದ ಹೊಸ ಮರಿಗಳು! ಜ್ವಾಲಾ ಎಂಬ ಹೆಸರಿನ ನಮೀಬಿಯಾ ಚಿರತೆ ಮೂರು ಮರಿಗಳಿಗೆ ಜನ್ಮ ನೀಡಿದೆ. ಇದು ನಮೀಬಿಯಾದ ಚಿರತೆ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿದ ಕೆಲವೇ ವಾರಗಳ ನಂತರದಲ್ಲಿ ಮರಿಹಾಕಿದೆ. ದೇಶದಾದ್ಯಂತ ಎಲ್ಲಾ ವನ್ಯಜೀವಿ ಪ್ರೇಮಿಗಳು ಈ ವಿಷಯ ತಿಳಿದ ತಕ್ಷಣ ಶುಭಾಶಯಗಳನ್ನು ವ್ಯಕ್ತಪಡಿಸಿದ್ದೀರಿ ಅದಕ್ಕೆ ವಿಶೇಷ ಧನ್ಯವಾದಗಳು. ಭಾರತ ವನ್ಯಜೀವಿಗಳು ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಪೋಸ್ಟ್​ ಮಾಡಿದ್ದಾರೆ.
A Namibian Cheetah named Jwala has given birth to three cubs. This comes just weeks after Namibian Cheetah Aasha gave birth to her cubs.
Union Environment Minister Bhupender Yadav shares the video on his 'X' handle.pic.twitter.com/dgOsISpTU0
— ANI (@ANI)January 23, 2024

ಇದಕ್ಕೂ ಮುನ್ನ ಜನವರಿ 3ರಂದು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿತ್ತು. ಚೀತಾ ಯೋಜನೆಯಡಿ ತಾಯಿ ಚಿರತೆ ಜ್ವಾಲಾ ಸೇರಿದಂತೆ 8 ಚಿರತೆಗಳನ್ನು ಸೆಪ್ಟೆಂಬರ್ 17, 2022ರಂದು ನಮೀಬಿಯಾದಿಂದ ಕುನೋಗೆ ತರಲಾಯಿತು,(ಏಜೆನ್ಸೀಸ್).
VIDEO| ರಾಮಮಂದಿರ ಉದ್ಘಾಟನೆಯ ಮೊದಲ ದಿನವೇ ಹರಿದುಬಂತು ಭಕ್ತಸಾಗರ! ಬೆಳಗ್ಗೆ 3 ಗಂಟೆಯಿಂದಲೇ ಭಾರೀ ಕ್ಯೂ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 11 =
Remember me
