ಚಂಡೀಗಢ:ಪಿಜಿ ವಸತಿ ನಿಲಯದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಮೂವರು ಯುವತಿಯರು ದುರಂತ ಸಾವಿಗೀಡಾಗಿರುವ ಘಟನೆ ಚಂಡೀಗಢದ 32ನೇ ಸೆಕ್ಟರ್​ನಲ್ಲಿ ನಡೆದಿರುವುದಾಗಿ ಜಿಲ್ಲಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಶನಿವಾರ ತಿಳಿಸಿದೆ.
ವಸತಿ ನಿಲಯದಲ್ಲಿ ಒಟ್ಟು 36 ವಿದ್ಯಾರ್ಥಿನಿಯರಿದ್ದರು. ಅಗ್ನಿ ಅವಘಡ ಸಂಭವಿಸಿದಾಗ ಬಹುತೇಕರು ಹೊರಗಡೆ ಬಂದಿದ್ದಾರೆ. ಆದರೆ, ದುರಾದೃಷ್ಟವಶಾತ್​ ಮೂವರು ವಿದ್ಯಾರ್ಥಿನಿಯರು ಸಾವಿಗೀಡಾಗಿದ್ದಾರೆ. ಸುಟ್ಟ ಗಾಯಗಳು ಮತ್ತು ಉಸಿರಾಟದ ತೊಂದರೆಯಿಂದಾಗಿ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಮೂವರಲ್ಲಿ ಇಬ್ಬರು ಪಂಜಾಬ್​ ಮೂಲದವರಾಗಿದ್ದು, ಒಬ್ಬಳು ಹರಿಯಾಣದವಳು ಎಂದು ಹೇಳಲಾಗಿದೆ.
ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಶೌಚಗೃಹದ ಕಿಟಕಿಯಿಂದ ಕೆಳಗೆ ಜಿಗಿದು ಪಾರಾಗಿದ್ದಾರೆ. ಆದರೂ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿ ಹಲವು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಈವರೆಗೂ ತಿಳಿದುಬಂದಿಲ್ಲ. ಆದರೆ, ಓರ್ವ ವಿದ್ಯಾರ್ಥಿನಿ ತನ್ನ ಲ್ಯಾಪ್​ಟಾಪ್​ ಅನ್ನು ಚಾರ್ಜಿಂಗ್​ನಲ್ಲಿ ಇಟ್ಟಿದ್ದಾಗ ಅಡಾಪ್ಟರ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮೂವರು ವಿದ್ಯಾರ್ಥಿನಿಯರು 19-22 ವಯೋಮಾನದವರಾಗಿದ್ದು, ಅವರನ್ನು ಮುಸ್ಕಾನ್​, ರಿಯಾ ಮತ್ತು ಪ್ರಾಕ್ಷಿ ಎಂದು ಗುರುತಿಸಲಾಗಿದೆ. ಇವರು ವಸತಿ ನಿಯಲದ ಮೊದಲನೇ ಮಹಡಿಯಲ್ಲಿ ವಾಸವಿದ್ದರು ಎಂದು ಚಂಡೀಗಢದ ಪೊಲೀಸ್​ ವರಿಷ್ಠಾಧಿಕಾರಿ ವಿನೀತ್​ ಕುಮಾರ್​ ಮಾಹಿತಿ ನೀಡಿದ್ದಾರೆ.
ವಸತಿ ನಿಲಯದ ಎತ್ತರ ಮಹಡಿಯನ್ನು ನಿಯಮ ಬಾಹಿರವಾಗಿ ನಿರ್ಮಿಸಲಾಗಿದೆ ಎಂದು ಇದೇ ವೇಳೆ ಪೊಲೀಸರು ತಿಳಿಸಿದ್ದು, ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
