ಛತ್ತೀಸ್​ಗಢ:ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗೆ ತೆರಳುತ್ತಿದ್ದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈ ಬಸ್ 47 ಬಿಜೆಪಿ ಕಾರ್ಯಕರ್ತರನ್ನು ಹೊತ್ತು ರಾಯ್‌ಪುರಕ್ಕೆ ಹೋಗುತ್ತಿತ್ತು. ಬಿಲಾಸ್‌ಪುರದ ರತನ್‌ಪುರ ಬಳಿ ನಿಂತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನ ಮುಂಭಾಗ ಹಾರಿ ಹೋಗಿದೆ. ಬಸ್ ಚಾಲಕ ನಿದ್ರಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಅಂತಾರಾಷ್ಟ್ರೀಯ ಚುಂಬನ ದಿನ: ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಾಕಾ ಒಂದು ಮುತ್ತು…
ಬೆಳಗಿನ ಜಾವ 5 ಗಂಟೆಗೆ ಈ ಅವಘಡ ಸಂಭವಿಸಿದೆ. ದಾರಿಹೋಕರು 112 ನಂಬರ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಹಾಗೂ ಆಸ್ಪತ್ರೆ ತಂಡ ಸ್ಥಳಕ್ಕೆ ಆಗಮಿಸಿದೆ. ಇದಾದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ”ಅಪಘಾತದ ಸುದ್ದಿ ತಿಳಿದಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಧೈರ್ಯ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಹಾರೈಸುತ್ತೇವೆ. ಮೃತರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ.ಗಳ ನೆರವು ಘೋಷಿಸುತ್ತೇನೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ನಿಲ್ಲುತ್ತೇವೆ” ಎಂದಿದ್ದಾರೆ.
ನಿಮ್ಮ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚು ಒತ್ತು ನೀಡಿ: ಶಾಸಕರಿಗೆ ಸಿಎಂ ಸಿದ್ದು ಕಿವಿಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
