ಇಂಫಾಲ:ಮಣಿಪುರದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಸಂತ್ರಸ್ತರಾಗಿದ್ದಾರೆ.
ಇದನ್ನೂ ಓದಿ:ವಿಶ್ವದ ನಂ.1 ಚೆಸ್‌ ಮಾಸ್ಟರ್‌ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಪ್ರಜ್ಞಾನಂದಗೆ ಮೊದಲ ಗೆಲವು!
ಸೇನಾಪತಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತದಲ್ಲಿ 34 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ಜಿಲ್ಲೆಯಲ್ಲಿ ಸೇನಾಪತಿ ನದಿ ಉಕ್ಕಿ ಹರಿಯುತ್ತಿದೆ.
ರಾಜಧಾನಿ ಇಂಫಾಲ್‌ನಲ್ಲಿ ಭಾರೀ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಇಂಫಾಲ್, ನಂಬುಲ್ ಮತ್ತು ಕೊಂಗ್ಬಾ ಸೇರಿದಂತೆ ಎಲ್ಲಾ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ನೂರಾರು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು, ಮನೆಗಳು ಮತ್ತು ಪ್ರಮುಖ ಕಟ್ಟಡಗಳಿಗೆ ನೀರು ನುಗ್ಗಿದೆ.
ಬುಧವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇಂಫಾಲ್ ಪೂರ್ವ ಜಿಲ್ಲೆಯ ಕೀರಾಂಗ್, ಖಬಾಮ್ ಮತ್ತು ಲೈರಿಯೆಂಗ್‌ಬಾಮ್ ಲೈಕೈ ಬಳಿ ಇಂಫಾಲ್ ನದಿಯ ದಡ ಒಡೆದಿದೆ. ಸಾವಿರಾರು ಮಂದಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅರೆ ಮಿಲಿಟರಿ ಸಿಬ್ಬಂದಿ, ಮಣಿಪುರ ಪೊಲೀಸರು ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಎನ್‌ಡಿಆರ್‌ಎಫ್ ತಂಡವು ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ಇಂಫಾಲ್‌ಗೆ ಆಗಮಿಸಿದೆ.
ಕೆಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, ನದಿ ದಡಗಳು ಒಡೆದಿರುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಮತ್ತು ಜಾನುವಾರುಗಳಿಗೆ ತೊಂದರೆಯಾಗಿದೆ ಎಂದು ಹೇಳಿದರು.
‘ಮೋದಿಯವರನ್ನು ಘಟಾಘಟ್​ ಅಂತ ತೆಗೆಯಿರಿ, ನಿಮ್ಮ ಇಂಜಿನ್‌ಗಳು ಖಟಾಖಟ್​ ಅಂತ ಚಲಿಸುತ್ತವೆ’: ರಾಹುಲ್‌ ಗಾಂಧಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
