ಭೋಪಾಲ್​:ಬೇಟೆಗಾರರನ್ನು ಹಿಡಿಯಲು ಹೋದ ಮೂವರು ಪೊಲೀಸರು ಬೇಟೆಗಾರರ ಗುಂಡೇಟಿಗೆ ಬಲಿಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೇಟೆಗಾರರು ಕೃಷ್ಣಮೃಗ ಬೇಟೆಯಾಡಲು ಗ್ರಾಮದ ಸಮೀಪದ ಅರಣ್ಯದಲ್ಲಿ ಹೋಗಿರುವ ಮಾಹಿತಿ ಪಡೆದ ಪೊಲೀಸರು, ಕೂಡಲೇ ಸ್ಥಳಕ್ಕೆ ತಲುಪಿದ್ದಾರೆ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಶನಿವಾರ ಮುಂಜಾನೆ 3 ಗಂಟೆಗೆ ಅರಣ್ಯ ಪ್ರದೇಶಕ್ಕೆ ತಲುಪಿದ ಪೊಲೀಸರ ತಂಡ ಬೇಟೆಗಾರರನ್ನು ಸುತ್ತುವರಿದಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಬೇಟೆಗಾಗಿ ತಂದಿದ್ದ ಬಂದೂಕಿನಿಂದಲೇ ಪೊಲೀಸರ ಮೇಲೆ ಹಾರಿಸಿದ್ದಾರೆ. ಕೂಡಲೇ ಎಸ್​ಐ ಸೇರಿ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.
ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಅವರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.(ಏಜೆನ್ಸೀಸ್​)
ಕಚೇರಿಗೆ ಬಂದು ಕೆಲಸ ಮಾಡಿ ಅಂದಿದ್ದಕ್ಕೆ 800 ಉದ್ಯೋಗಿಗಳಿಂದ ರಾಜೀನಾಮೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + fifteen =
Remember me
