ಲಖನೌ:ಆಘಾತಕಾರಿ ಘಟನೆಯೊಂದರಲ್ಲಿ ಕಸ್ಟಡಿಯಲ್ಲಿದ್ದ ಮೂವರು ಕಳ್ಳರು ಜನನಿಬಿಡ ಪ್ರದೇಶದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಉತ್ತರಪ್ರದೇಶ ಸರ್ಕಾರ 8 ಮಂದಿ ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಿದೆ.
ಪರಾರಿಯಾಗಿರುವವರನ್ನು ಬ್ರಿಜೇಂದ್ರ (27), ಜ್ಞಾನಪ್ರಸಾದ್​ (23), ಶೈಲೇಂದ್ರ (20) ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪೊಲೀಸರ ಕಾರ್ಯವೈಖರಿ ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಏಳು ಮಂದಿಯನ್ನು ರೈಲ್ವೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪೊಲೀಸ್​ ಅಧಿಕಾರಿಗಳು ಟೀ ಕುಡಿಯಲೆಂದು ನ್ಯಾಯಾಲಯಕ್ಕೆ ಕೂಗಳತೆ ದೂರದಲ್ಲಿ ವಾಹನವನ್ನು ನಿಲ್ಲಿಸಿದ್ದಾರೆ.
यूपी के झांसी में तीन कैदी पुलिस वैन से फरार, सीसीटीवी में कैद हुई वारदात…pic.twitter.com/5ZRZjxOzQ4
ಇದನ್ನೂ ಓದಿ:ಡೊನಾಲ್ಡ್ ಟ್ರಂಪ್​ ಮಗನ ಎಕ್ಸ್​ ಖಾತೆ ಹ್ಯಾಕ್​ ಮಾಡಿ ಅಪ್ಪ ನಿಧನರಾಗಿದ್ದಾರೆಂದು ಪೋಸ್ಟ್​!
ಇದನ್ನೇ ಅವಕಾಶ ಮಾಡಿಕೊಂಡ ಮೂವರು ಆರೋಪಿಗಳು ವ್ಯಾನಿನ ಬಾಗಿಲು ತೆರೆದಿರುವುದನ್ನು ನೋಡಿ ಪರಾರಿಯಾಗಿದ್ದಾರೆ. ವ್ಯಾನಿನಲ್ಲಿದ್ದ ನಾಲ್ವರು ಈ ಬಗ್ಗೆ ಪೊಲೀಸರಿಗೆ ತಕ್ಷಣವೇ ತಿಳಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ತಲೆಮಾರಿಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು, ಅವರ ಬಂಧನಕ್ಕಾಗಿ ಮೂರು ವಿಶೇಷ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆಯಲಾಗುವುದು.
ಪ್ರಕರಣ ಸಂಬಂಧ ಮೂವರು ಸಬ್​ಇನ್ಸ್​ಪೆಕ್ಟರ್​ ಸೇರಿದಂತೆ ಎಂಟು ಮಂದಿ ಪೊಲೀಸರನ್ನು ಕರ್ತವ್ಯ ಲೋಪ ಆರೋಪದಡಿ ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + three =
Remember me
