ಕಲ್ಕತ್ತಾ:ಪ್ರಸಿದ್ಧ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರಪ್ರದೇಶದ ಮೂವರು ಸಾಧುಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ.
ಮಕರ ಸಂಕ್ರಾಂತಿ ಪ್ರಯುಕ್ತ ನಡೆಯುವ ಗಂಗಾಸಾಗರ ಮೇಳದಲ್ಲಿ ಭಾಗಿಯಾಗಲು ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಭಿಜಿತ್​ ಬ್ಯಾನರ್ಜಿ, ಉತ್ತರಪ್ರದೇಶ ಮೂಲದ ಮೂವರು ಸಾಧುಗಳು ಗಂಗಾಸಾಗರ ಮೇಳಕ್ಕೆ ತೇರಳುವ ಮಾರ್ಗಮಧ್ಯೆ ದಾರಿ ಹೇಗೆ ಹೋಗುವುದು ಎಂದು ದಾರಿ ಕೇಳಿದ್ದಾರೆ. ಮೂವರನ್ನು ನೋಡಿ ಅನುಮಾನಗೊಂಡ ಜನರು ಅವರನ್ನು ಅಪಹರಣಕಾರರು ಎಂದು ಭಾವಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
Absolutely shocking incident reported from Purulia in West Bengal. In a Palghar kind lynching, sadhus traveling to Gangasagar for Makar Sankranti, were stripped and beaten by criminals, affiliated with the ruling TMC.In Mamata Banerjee’s regime, a terrorist like Shahjahan Sheikh…pic.twitter.com/DsdsAXz1Ys
ಇದನ್ನೂ ಓದಿ:ಸೀಟಿಗಾಗಿ ಬಡಿದಾಡಿಕೊಂಡ ಮಹಿಳೆಯರು; ನಿಜವಾದ ನಾರಿಶಕ್ತಿ ಅನಾವರಣ ಎಂದ ನೆಟ್ಟಿಗರು
ವಿಚಾರ ತಿಳದ ಅಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಮೂವರನ್ನು ರಕ್ಷಿಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಭಿಜಿತ್​ ಬ್ಯಾನರ್ಜಿ ತಿಳಿಸಿದ್ದಾರೆ.
ಇತ್ತ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಅಮಿತ್​ ಮಾಳವೀಯಾ, ಸಂಕ್ರಾಂತಿ ನಿಮಿತ್ತ ಗಂಗಾಸಾಗರಕ್ಕೆ ತೆರಳುತ್ತಿದ್ದ ಸಾಧುಗಳನ್ನು ವಿವಸ್ತ್ರಗೊಳಿಸಿ ಹತ್ಯೆ ಮಾಡಿರುವುದು ನೋವುಂಟು ಮಾಡಿದೆ. ಇದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಟಿಎಂಸಿ ಆಡಳಿತದಲ್ಲಿ ಷಹಜಹಾನ್ ಶೇಖ್‌ನಂತಹ ಭಯೋತ್ಪಾದಕನಿಗೆ ರಕ್ಷಣೆ ಸಿಗುತ್ತಿದೆ. ಆದರೆ, ಸಾಧುಗಳನ್ನು ಹತ್ಯೆ ಮಾಡಲಾಗುತ್ತಿದೆ. ಬಂಗಾಳದಲ್ಲಿ ಹಿಂದೂ ಆಗಿರುವುದು ಅಪರಾಧ ಎಂದು ಕಿಡಿಕಾರಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
