ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ಮೂರು ಮಾಲ್‌ಗಳು ಮತ್ತು ಆಸ್ಪತ್ರೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ವಿಧಾನಸಭೆ ಚುನಾವಣೆ: ಆಗಸ್ಟ್​ 21-22ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಖರ್ಗೆ, ರಾಹುಲ್ ಗಾಂಧಿ ಭೇಟಿ
ಚಾಣಕ್ಯಪುರಿಯ ಚಾಣಕ್ಯ ಮಾಲ್, ಸಾಕೇತ್‌ನಲ್ಲಿರುವ ಸೆಲೆಕ್ಟ್ ಸಿಟಿ ವಾಕ್, ವಸಂತ್ ಕುಂಜ್‌ನಲ್ಲಿರುವ ಆಂಬಿಯೆನ್ಸ್ ಮಾಲ್ ಮತ್ತು ಚಾಣಕ್ಯಪುರಿಯಲ್ಲಿರುವ ಪ್ರೈಮಸ್ ಆಸ್ಪತ್ರೆ ಸೇರಿ ಇತರ ಕೆಲವು ಸ್ಥಳಗಳಲ್ಲಿ ಬಾಂಬ್ ಬೆದರಿಕೆಯ ಕುರಿತು ಮಾಹಿತಿ ಪಡೆದಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇ-ಮೇಲ್‌ನಲ್ಲಿ ಬರೆಯಲಾದ ಬೆದರಿಕೆಯು ಕೆಲವೇ ಗಂಟೆಗಳಲ್ಲಿ ಬಾಂಬ್ ಸ್ಫೋಟಗೊಳ್ಳುತ್ತದೆ ಎಂದು ಉಲ್ಲೇಖಿಸಿತ್ತು. ಈ ಹಿನ್ನಲೆಯಲ್ಲಿ ಭದ್ರತಾ ಸಿಬ್ಬಂದಿ ಅಲ್ಲಿರುವ ಜನರನ್ನು ಸ್ಥಳಾಂತರಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು.
ದೆಹಲಿಯ ಹಲವು ಆಸ್ಪತ್ರೆ ಹಾಗೂ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ನಿರಂತರವಾಗಿ ಬರುತ್ತಲೇ ಇವೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಅಲ್ಲದೆ ಬಹುತೇಕ ಸಂದರ್ಭದಲ್ಲಿ ಹುಸಿ ಬಾಂಬ್ ಕರೆಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಸ್ಥಾನದ ಕೋಟಾದಲ್ಲಿ 18 ವರ್ಷದ ವಿದ್ಯಾರ್ಥಿ ಶವ ಪತ್ತೆ: ಮರಣೋತ್ತರ ಪರೀಕ್ಷೆಗೆ ಪೋಷಕರು ನಿರಾಕರಣೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eight − 7 =
Remember me
