ಲಖನೌ:ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 8 ಮಂದಿ ಮೃತಪಟ್ಟು, 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಲಖನೌನ ಟ್ರಾನ್ಸ್​ಪೋರ್ಟ್​​ನಗರದಲ್ಲಿ ನಡೆದಿದೆ. ಅವಶೇಷಗಳಡಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಶನಿವಾರ ಸಂಜೆ ಐದು ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಿಕೊಳ್ಳಲಾಗುತ್ತಿತ್ತು ಎಂದು ವರದಿಯಾಗಿದೆ. ಮೂರನೇ ಮಹಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಹೀಗಾಗಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಮಾತನಾಡಿರುವ ರಕ್ಷಣಾ ತಂಡದ ಅಧಿಕಾರಿ ನವೀನ್​ ಕುಮಾರ್​, ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
#WATCH| Lucknow building collapse | Lucknow Divisional Commissioner, Roshan Jacob says, "… So far 4 people have died in the incident. The rescue operation is being carried out…"pic.twitter.com/0W9dEFlzqW
ಇದನ್ನೂ ಓದಿ:VIDEO| ನೆರೆ ವೀಕ್ಷಣೆ ವೇಳೆ ದಿಢೀರ್​ ಬಂದ ರೈಲು; ಮುಂದೇನಾಯ್ತು ನೀವೇ ನೋಡಿ
ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, ಮ್ಯಾಜಿಸ್ಟ್ರೇಟ್ ಜೊತೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಕರೆ ಮಾಡಿ ಎಲ್ಲಾ ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ. ಸಂತ್ರಸ್ತರಿಗೆ ಸಾಧ್ಯವಾಗುವ ಎಲ್ಲಾ ಸಹಾಯವನ್ನು ಮಾಡುತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದು, ರಕ್ಷಣಾ ಕಾರ್ಯದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಆದೇಶಿಸಿದ್ದಾರೆ.
#WATCH| Lucknow Building collapse | DM Lucknow Suryapal Gangwar says, "So far, 13 people have been evacuated. The death of one person is reported… NDRF and SDRF teams are working. One more person is feared to be trapped…"pic.twitter.com/dxFXaWdMQj
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:sixteen − 6 =
Remember me
