ಜೈಪುರ:ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್​ ಪಲ್ಟಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 30 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ನಡೆದಿದೆ.
30 ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಶಾಲಾ ಬಸ್​ ಪೋಕ್ರಾನ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಜೈಸಲ್ಮೇರ್​ ಹಾಗೂ ಜೈಪುರದಲ್ಲಿ ದಾಖಲಿಸಲಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಂಕ್ರಾ ಪೊಲೀಸ್​ ಠಾಣೆಯ ಅಧಿಕಾರಿ ಕೈಲಾಶ್​ ಚಂದ್​ ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿಕ್ರಂ ಕುಮಾರ್​ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಅಕ್ರಮ IVF ಕೇಂದ್ರಗಳನ್ನು ಭೇದಿಸಲು ಅಭಿಯಾನ ಆರಂಭಿಸಿದ ಚೀನಾ
ಅಪಘಾತದಲ್ಲಿ ಗಾಯಗೊಂಡಿರುವ 30ಕ್ಕೂ ಹೆಚ್ಚು ಮಕ್ಕಳು 10-15 ವರ್ಷ ವಯಸ್ಸಿನವರಾಗಿದ್ದು, ಎಲ್ಲರನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರಿಗೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ಸಂಕ್ರಾ ಪೊಲೀಸ್​ ಠಾಣೆಯ ಅಧಿಕಾರಿ ಕೈಲಾಶ್​ ಚಂದ್ ತಿಳಿಸಿದ್ದಾರೆ.
ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಜೈಸಲ್ಮೇರ್​ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಭೇಟಿ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳ ಆರೋಗ್ಯದ ಸ್ಥಿತಿಗತಿಯ ಕುರಿತು ತಮಗೆ ಮಾಹಿತಿ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + twenty =
Remember me
