ಚೆನ್ನೈ:ಯುವಕನೊಬ್ಬ ತನ್ನ ಪ್ರೇಯಸಿಯನ್ನು ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಹತ್ಯೆ ಮಾಡಿ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮರಿಮಲೈ ನಗರದಲ್ಲಿ ಮಂಗಳವಾರ ನಡೆದಿದೆ.
ಮೃತಳನ್ನು ಧರಣಿ (21) ಎಂದು ಗುರುತಿಸಲಾಗಿದೆ. ಈಕೆ ಮರಿಮಲೈ ನಗರದ ರಾಜೀವ್​ಗಾಂಧಿ ನಗರದ ನಿವಾಸಿ ಹಾಗೂ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್​ ಆಗಿರುವ ಸುಂದರ್​ ಎಂಬಾತನ ಪತ್ನಿ. ದಂಪತಿಗೆ ಇಬ್ಬರು ಮಕ್ಕಳಿದ್ದರು.
ಸುಂದರ್​ ಸ್ನೇಹಿತ ಸುಡಾನ್​ (30) ಆಗಾಗ ಮನೆಗೆ ಭೇಟಿ ನೀಡುತ್ತಿದ್ದ. ಇಬ್ಬರು ಜನತೆಯಲ್ಲೇ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಸುಡಾನ್​ ಮತ್ತು ಧರಣಿ ನಡುವೆ ಸ್ನೇಹ ಬೆಳೆದಿತ್ತು. ಸ್ನೇಹ ಅಕ್ರಮ ಸಂಬಂಧಕ್ಕೆ ತಿರುಗಿತು. ಇಬ್ಬರು ಸುಂದರ್​ಗೆ ಗೊತ್ತಾಗದಂತೆ ರಹಸ್ಯ ಸಂಬಂಧವನ್ನು ಇಟ್ಟುಕೊಂಡಿದ್ದರು.
ಇದನ್ನೂ ಓದಿ:ನಾಚಿಕೆಯಾಗಬೇಕು! ಚಂದ್ರಯಾನ-3 ಯಶಸ್ಸಿನ ಬಗ್ಗೆ ಪಾಕ್​ ನಟಿ ಸೆಹರ್​ ಶಿನ್ವಾರಿ ನೀಡಿದ ಹೇಳಿಕೆ ವೈರಲ್​
ಕೆಲವು ತಿಂಗಳುಗಳ ಹಿಂದೆ ಸುಂದರ್​ಗೆ ಈ ವಿಚಾರ ಗೊತ್ತಾಗಿ ಇಬ್ಬರಿಗೂ ಎಚ್ಚರಿಕೆ ನೀಡಿದ್ದ. ಇದಾದ ಬಳಿಕ ಧರಣಿ ಸುಡಾನ್​ ಜತೆ ಮಾತನಾಡುವುದನ್ನು ನಿಲ್ಲಿಸಿದಳು. ಇದರ ನಡುವೆ ಧರಣಿಗೆ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಇರುವುದು ಸುಡಾನ್​ಗೆ ತಿಳಿಯಿತು. ಬಳಿಕ ಸುಡಾನ್​, ಧರಣಿಯನ್ನು ಭೇಟಿಯಾಗಿ ಪ್ರಶ್ನೆ ಮಾಡಿದನು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿಯು ಸಹ ನಡೆಯಿತು.
ಆದರೆ, ಮರುದಿನ ಬೆಳಗ್ಗೆ ಅಂದರೆ ಮಂಗಳವಾರ ಸುಂದರ್​, ತನ್ನ ಕೆಲಸಕ್ಕೆ ತೆರಳಿದಾಗ, ಆತನ ಮನೆಗೆ ತೆರಳಿದ ಸುಡಾನ್​, ಎರಡು ವರ್ಷದ ಮಗಳ ಎದುರಲ್ಲೇ ಚಾಕುವಿನಿಂದ ಧರಣಿಯ ಮೇಲೆ ದಾಳಿ ಮಾಡಿದ್ದಾನೆ. ಆಕೆ ಮೃತಪಟ್ಟಿರುವುದು ಖಚಿತವಾದ ಬಳಿಕ ಚಾಕು ಸಮೇತ ಮರಿಮಲೈ ನಗರ ಪೊಲೀಸ್​ ಠಾಣೆಗೆ ತೆರಳಿ ಪೊಲೀಸರ ಮುಂದೆ ಸುಡಾನ್​ ಶರಣಾಗಿದ್ದಾನೆ.
ಇದಾದ ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಧರಣಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟು ಜನರಲ್​ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣವನ್ನು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.(ಏಜೆನ್ಸೀಸ್​)
ಕಾವೇರಿ ಸಂಕಷ್ಟ ಸೂತ್ರ, ಕಾನೂನು ಸಮರ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ಬಲ; ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ರಾಜ್ಯ ಸರ್ಕಾರದ ಆಗ್ರಹ

ಜಡಭರತನ ಶ್ರೇಷ್ಠ ಜೀವನಗಾಥೆ; ಸಂಸಾರದಲ್ಲಿದ್ದರೂ ಕುಶಲತೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
