ವಿಜಯವಾಡ:ಟಿವಿಎಸ್​ ಬೈಕ್​​ ಶೋರೂಂನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 300ಕ್ಕೂ ಹೆಚ್ಚು ವಾಹನ​ಗಳು ಸುಟ್ಟು ಕರಕಲಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ನಡೆದಿದೆ.
ಗುರುವಾರ ಬೆಳಗಿನ ಜಾವ 5 ಘಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Several two-wheelers were gutted, after a massive#firethat broke out in TVS showroom and godown, in KP Nagar area in#Vijayawada, fire fighters were doused the fire.Both Petrol and Electric vehicles were gutted in#Flames#FireAccident#ElectricVehicles#AndhraPradeshpic.twitter.com/1qzrDSxjff
ಇದನ್ನೂ ಓದಿ:VIDEO| ಕೆಲವು ಮುಸ್ಲಿಮರು ಸತ್ತರೆ ಏನೂ ನಷ್ಟವಾಗುವುದಿಲ್ಲ; ಕಾಂಗ್ರೆಸ್​ ನಾಯಕನ ವಿವಾದಾತ್ಮಕ ಹೇಳಿಕೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಒಬ್ಬರು ಚೆನ್ನೈ-ಕಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟಿವಿಎಸ್​ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋರೂಂನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಶೋರೂಂನಲ್ಲಿ ಎಲೆಕ್ಟ್ರಿಕ್​ ವಾಹನಗಳು ಇದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲೇ ಹರಡಿದೆ. ಶೋರೂಂ, ಗೋಡೌನ್​ ಹಾಗೂ ಸರ್ವೀಸ್​ ಸೆಂಟರ್​ ಒಂದೇ ಕಡೆ ಇದ್ದ ಕಾರಣ ಕಟ್ಟಡದಲ್ಲಿ ಹೆಚ್ಚಿನ ವಾಹನಗಳಿದ್ದವು. ಘಟನೆಯಲ್ಲಿ 300ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಸ್ಥಳದಲ್ಲಿ ಐದು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + twenty =
Remember me
