ಐಜ್ವಾಲ್:ಮಿಜೋರಾಂ ವಿಧಾನಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸರ್ಕಾರಿ ಉದ್ಯೋಗ ಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿ ನೀಡುವ ಬಗ್ಗೆ ಘೊಷಣೆ ಮಾಡಿದ್ದಾರೆ. ಹಾಲಿ ಎಂಎನ್​ಎಫ್ ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸುವುದಾಗಿಯೂ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ‘ಅನೇಕ ರಾಜಕೀಯ ಪಕ್ಷಗಳು ಹತ್ತು ಹಲವು ಭರವಸೆ ನೀಡುವ ಪ್ರಣಾಳಿಕೆಯೊಂದಿಗೆ ಹೊರಬರುತ್ತವೆ. ಆದರೆ ಅವು ಕೇವಲ ಕಾಗದದ ತುಂಡುಗಳಾಗಿಯೇ ಉಳಿದುಕೊಳ್ಳುತ್ತವೆ. ಬಿಜೆಪಿ ಪೂರ್ಣ ಸಂಶೋಧನೆಯೊಂದಿಗೆ ವಿಷನ್ ಡಾಕ್ಯುಮೆಂಟ್​ನ್ನು ಹೊರತಂದಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಕೃಷಿ ಮೂಲಸೌಕರ್ಯಗಳನ್ನು ನವೀಕರಿಸಲು 1,000 ಕೋಟಿ ರೂ. ಹೂಡಿಕೆ ಮಾಡಲಿದೆ. ರಾಜ್ಯದ ಮೊದಲ ಸಂಪೂರ್ಣ ಮಹಿಳಾ ಪೊಲೀಸ್ ಬೆಟಾಲಿಯನ್ ಕೂಡ ಸ್ಥಾಪಿಸಲಾಗುತ್ತದೆ. ‘ಕ್ವೀನ್ ರೊಪುಲಿಯಾನಿ ಮಹಿಳಾ ಸಬಲೀ ಕರಣ ಯೋಜನೆ’ ಪರಿಚಯಿಸುತ್ತೇವೆ. ಅದರ ಮೂಲಕ ಪ್ರತಿ ಹೆಣ್ಣುಮಗುವಿಗೆ 1.5 ಲಕ್ಷ ರೂ. ಮೊತ್ತದ ಸಂಚಿತ ಆರ್ಥಿಕ ಸಹಾಯವನ್ನು ನೀಡಲಾಗುವುದು ಎಂದೂ ಭರವಸೆ ನೀಡಿದ್ದಾರೆ. ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ 250 ಕೋಟಿ ರೂ., ಹೊಸ ಸರ್ಕಾರಿ ಕಾಲೇಜುಗಳನ್ನು ನಿರ್ವಿುಸಲು 350 ಕೋಟಿ ರೂ. ಮತ್ತು ಈಗಿರುವ ಕಾಲೇಜುಗಳ ಸುಧಾರಣೆಗೆ 350 ಕೋಟಿ ರೂ. ಬಜೆಟ್​ನಲ್ಲಿ ಮೀಸಲಿಡಲಾಗುವುದು ಎಂದು ಬಿಜೆಪಿ ಹೇಳಿದೆ.
ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯ ನಾಯಕರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರಕಟಿಸಿದ್ದಾರೆ. ರಾಜ್ಯದ ಸೂರ್ಯಪೇಟ್ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡ ಅವರು, ‘ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿ ಅವರಿಗೆ ಪ್ರಮುಖ ಹುದ್ದೆ ನೀಡಲು ಬಿಜೆಪಿ ಕಟಿಬದ್ಧವಾಗಿದೆ. ಹೀಗಾಗಿ, ನೀವು ಬಿಜೆಪಿಯನ್ನು ಆಯ್ಕೆ ಮಾಡಬೇಕು’ ಎಂದು ವಿನಂತಿಸಿಕೊಂಡಿದ್ದಾರೆ.
ರಾಜಸ್ಥಾನದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಪೊಲೀಸರು ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಆಭರಣ ಸೇರಿ 217 ಕೋಟಿ ರೂ. ಮೌಲ್ಯದ ಚುನಾವಣಾ ಉಚಿತ’ ಉಡುಗೊರೆಗಳನ್ನು ವಶಪಡಿಸಿ ಕೊಂಡಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಕುಮಾರ್ ಹೇಳಿದ್ದಾರೆ. ಇದರಲ್ಲಿ 25 ಕೋಟಿ ರೂ. ಮೊತ್ತದ ನಗದು, 20 ಕೋಟಿ ರೂ. ಮೌಲ್ಯದ ಮದ್ಯ ಮತ್ತು 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೇರಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ವಣದ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ ಎಂಬ ಬಿಜೆಪಿ ಪಕ್ಷದ ಪೋಸ್ಟರ್​ಗಳಿಗೆ ಮಧ್ಯಪ್ರದೇಶ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಪ್ರಚಾರದಲ್ಲಿ ಧಾರ್ವಿುಕ ಚಿಹ್ನೆಗಳನ್ನು ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದಕ್ಕೆ ಕಿಡಿಕಾರಿರುವ ಬಿಜೆಪಿ, ಕಾಂಗ್ರೆಸ್ ಭಗವಾನ್ ಶ್ರೀರಾಮ, ಹಿಂದುತ್ವ ಮತ್ತು ಸನಾತನ ಧರ್ಮದ ವಿರುದ್ಧವಾಗಿದೆ. ರಾಮ ಮಂದಿರ ಮಧ್ಯಪ್ರದೇಶ ಮತ್ತು ದೇಶದ ಕೋಟ್ಯಂತರ ಜನರ ನಂಬಿಕೆಯ ಕೇಂದ್ರವಾಗಿದ್ದು, ಕಾಂಗ್ರೆಸ್ ಕೂಡ ಇಂತಹ ಪೋಸ್ಟರ್​ಗಳನ್ನು ಹಾಕಿಕೊಳ್ಳಲಿ. ಪ್ರಧಾನಿ ನರೇಂದ್ರ ಮೋದಿಯವರ ಇಚ್ಛಾಶಕ್ತಿಯಿಂದಾಗಿ 2024 ಜನವರಿ 22ರಂದು ರಾಮಮಂದಿರ ಲೋಕಾರ್ಪಣೆಯಾಗುತ್ತಿದ್ದು, ಕಾಂಗ್ರೆಸ್​ಗೆ ನೋವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಚುನಾವಣೆ ಸಮಯದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು ಅನುಮಾನ ಹೆಚ್ಚಿಸಿದೆ. ವಿಪಕ್ಷಗಳ ಉನ್ನತ ನಾಯಕರನ್ನು ಗುರಿಯಾಗಿಸುವುದು ಇದೇನು ಮೊದಲಲ್ಲ. ಚುನಾವಣೆ ಮುಗಿದ ನಂತರ ಈ ಪ್ರಕರಣಗಳನ್ನು ಮರೆತುಬಿಡಲಾಗುತ್ತದೆ. ಏಜೆನ್ಸಿಗಳನ್ನು ರಾಜಕೀಯ ಸಾಧನಗಳಾಗಿ ಬಳಸಲಾಗುತ್ತಿದೆ. ಇದು ಜನತೆಗೆ ಸ್ಪಷ್ಟವಾಗಿ ಕಾಣಿಸುತ್ತಿದೆ.
| ಸಚಿನ್ ಪೈಲಟ್ ಕಾಂಗ್ರೆಸ್ ನಾಯಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − four =
Remember me
