ಭೋಪಾಲ್:ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 39ಕ್ಕೂ ಹೆಚ್ಚು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ ಜಿಲ್ಲೆಯಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತರು ಭೋಪಾಲ್​ನಲ್ಲಿ ಸೋಮವಾರ ನಡೆಯುತ್ತಿರುವ ಕಾರ್ಯಕರ್ತ ಮಹಾಕುಂಭಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ. ಖಾರ್ಗೋನ್​ ಜಿಲ್ಲೆಯ ಕಾಸರವಾಡ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಹಿಂದೂಯೇತರ ಸಮುದಾಯಗಳ ಜತೆ ಹೆಚ್ಚು ಬೆರೆಯಿರಿ; ಆರ್​ಎಸ್​ಎಸ್​ ಕಾರ್ಯಕರ್ತರಿಗೆ ಕರೆ ನೀಡಿದ ಮೋಹನ್​ ಭಾಗವತ್
ಜನಸಂಘದ ಸಹ ಸಂಸ್ಥಾಪಕ ದೀನ್​ದಯಾಳ್​ ಉಪಧ್ಯಾಯ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕಾರ್ಯಕರ್ತ ಮಹಾಕುಂಭವನ್ನು ಆಯೋಜಿಸಲಾಗಿದೆ. ಮಧ್ಯಪ್ರದೇಶದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಳೆದ 45ದಿನಗಳ ಅಂತರದಲ್ಲಿ ಪ್ರಧಾನಿ ಮೋದಿ ಮೂರನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಸಮಾವೇಶದಲ್ಲಿ ಸುಮಾರು 10ಲಕ್ಷ ಮಂದಿ ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − four =
Remember me
