ನವದೆಹಲಿ:ಪಡಿತರ ಚೀಟಿ ವ್ಯವಸ್ಥೆಯಲ್ಲಿನ ಲೋಪ-ದೋಷಗಳನ್ನು ಸರಿಪಡಿಸಲು ಮುಂದಾಗಿರುವ ಸರ್ಕಾರ ದೊಡ್ಡ ಪ್ರಮಾಣದಲ್ಲೇ ಇದ್ದ ಅನರ್ಹ ಹಾಗೂ ನಕಲಿ ಪಡಿತರ ಚೀಟಿಗಳನ್ನು ರದ್ದು ಪಡಿಸಿದೆ. ಅಂದರೆ 2013ರಿಂದ 2020ರ ವರೆಗೆ ಒಟ್ಟು 4.39 ಕೋಟಿ ಪಡಿತರ ಚೀಟಿಗಳನ್ನು ಅದು ರದ್ದುಪಡಿಸಿದೆ.
ವಿವಿಧ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸರ್ಕಾರಗಳ ಮೂಲಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆಹಾರ, ನಾಗರಿಕ ಸೇವಾ ಮತ್ತು ಸರಬರಾಜು ಸಚಿವಾಲಯ ಮಾಹಿತಿ ನೀಡಿದೆ. ತಂತ್ರಜ್ಞಾನ ಆಧಾರಿತ ಸಾರ್ವಜನಿಕ ಸರಬರಾಜು ವ್ಯವಸ್ಥೆಯ ಸುಧಾರಣೆ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಪಡಿತರ ಚೀಟಿಗಳು ಮತ್ತು ಫಲಾನುಭವಿಗಳ ದತ್ತಾಂಶಗಳ ಡಿಜಿಟಲೀಕರಣ, ಆಧಾರ್​ ಸೀಡಿಂಗ್​, ಅನರ್ಹ ಹಾಗೂ ನಕಲಿ ಪಡಿತರ ಚೀಟಿಗಳ ಪತ್ತೆ, ದತ್ತಾಂಶಗಳ ನಕಲು ಪತ್ತೆ, ವಲಸೆ ಹಾಗೂ ಮೃತ ಫಲಾನುಭವಿಗಳ ಮಾಹಿತಿ ಅಪ್​ಡೇಟ್​ ಮಾಡುವ ಮೂಲಕ ಇದು ಸಾಧ್ಯವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
