ನವದೆಹಲಿ:ಉತ್ತರ ಪ್ರದೇಶದ ಮೀರತ್‌ನಲ್ಲಿ ವಿದ್ಯಾರ್ಥಿಗೆ ಥಳಿಸಿ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣದಲ್ಲಿ ಇನ್ನೂ ಮೂವರನ್ನು ಬಂಧಿಸಲಾಗಿದೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಇದನ್ನೂ ಓದಿ:ಯುಎಸ್ ವೀಸಾ ಪಡೆಯುವ ಭಾರತೀಯ ವಿದ್ಯಾರ್ಥಿಗಳಿಗೆ ಇಂದಿನಿಂದ ಹೊಸ ನಿಯಮ ಜಾರಿದಾಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇತ್ತೀಚೆಗಷ್ಟೇ ಇಂಟರ್‌ಮೀಡಿಯೇಟ್‌ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನ.13ರಂದು ಚಿಕ್ಕಮ್ಮನ ಮನೆಗೆ ತೆರಳಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಆ ರಾತ್ರಿ ವಿದ್ಯಾರ್ಥಿ ಮನೆಗೆ ಬಂದಿರಲಿಲ್ಲ. ಮರುದಿನ ಬೆಳಳಗ್ಗೆ ಆತ ಹಿಂತಿರುಗಿ ಮನೆಗೆ ಬಂದಾಗ ಹೊಡೆದ ಬಗ್ಗೆ ಹೇಳಿದ್ದ. ಆದರೆ ಮೂತ್ರ ವಿಸರ್ಜನೆಯ ಘಟನೆಯನ್ನು ಹೇಳಲಿಲ್ಲ. ಕೆಲವು ದಿನಗಳ ನಂತರ ವೀಡಿಯೊ ಕಾಣಿಸಿಕೊಂಡಾಗ ಆತ ಎಲ್ಲವನ್ನೂ ಬಹಿರಂಗಪಡಿಸಿದ್ದ ಎನ್ನಲಾಗಿದೆ.
ವೀಡಿಯೊದಲ್ಲಿ ದುಷ್ಕರ್ಮಿಗಳು ಮದ್ಯಪಾನ ಮಾಡಿ ಥಳಿಸುತ್ತಿರುವುದು ಕಂಡುಬಂದಿತ್ತು. ನಂತರ ಒಬ್ಬ ವ್ಯಕ್ತಿಯು ಅವನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸಂತ್ರಸ್ತ ತನಗೆ ಆದ ಅವಮಾನವನ್ನು ದಾಖಲಿಸಬೇಡಿ ಎಂದು ಅವರಲ್ಲಿ ಮನವಿ ಮಾಡುವುದನ್ನು ಸಹ ಕೇಳಬಹುದಾಗಿತ್ತು. ದಾಳಿಕೋರರಲ್ಲಿ ಆತನ ಇಬ್ಬರು ಸ್ನೇಹಿತರು ಸೇರಿದ್ದಾರೆ ಎಂದು ಆತನ ಕುಟುಂಬದವರು ಆರೋಪಿಸಿದ್ದಾರೆ.
ಏಳು ಜನರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದ್ದು, ನಾಲ್ವರನ್ನು ಗುರುತಿಸಲಾಗಿದೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಗಳಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಐಎಎಸ್ ಅಧಿಕಾರಿ ಅತೀಕ್ ಸಿಎಂ ಅಪರ ಮುಖ್ಯ ಕಾರ್ಯದರ್ಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + eleven =
Remember me
