ಶಿಲ್ಲಾಂಗ್:ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಾಮೂರ್ತಿ ಬಿ.ವೀರಪ್ಪ ಪ್ರಮಾಣ ವಚನ ಸ್ವೀಕಾರ
ಕೈ ಕಾಲು ಕಟ್ಟಿ ಹಾಕಿದ್ದ ಸ್ಥಿತಿಯಲ್ಲಿ ಹಾಗೂ ಕುತ್ತಿಗೆ ಮೇಲೆ ಗಾಯದ ಗುರುತುಗಳಿರುವ ನಾಲ್ಕು ಮೃತದೇಹಗಳು ಉಂಪ್ಲೆಂಗ್ ಗ್ರಾಮದ ಹೊರವಲಯದಲ್ಲಿರುವ ಕಾಡಿನಲ್ಲಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಕಾರ್ಮಿಕರು ಮೃತ ದೇಹಗಳನ್ನು ಪತ್ತೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. “ಮೃತರು ಹೊರ ರಾಜ್ಯದವರು ಎಂದು ಶಂಕಿಸಲಾಗಿದೆ. ಆದರೆ ಸೂಕ್ತ ತನಿಖೆ ನಂತರ ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಿರಿ ಪ್ರಸಾದ್ ತಿಳಿಸಿದ್ದಾರೆ.
ಇಲ್ಲಿಯೇ ಹತ್ಯೆ ಮಾಡಲಾಗಿದೆಯೇ ಅಥವಾ ಬೇರೆಡೆ ಕೊಲೆಗೈದು ಶವಗಳನ್ನು ಉಂಪ್ಲೆಂಗ್‌ನಲ್ಲಿ ತಂದು ಹಾಕಲಾಗಿದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ನಲ್ಲಿ ಉಗ್ರರ ದಾಳಿ ಓರ್ವ ಯೋಧ ಹುತಾತ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 19 =
Remember me
