ಚೆನ್ನೈ:ಅಪ್ರಾಪ್ತ ವಯಸ್ಕಳೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿರುವ ಘಟನೆ ತಮಿಳುನಾಡಿನ ತಿರುಚಿ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ನಾಲ್ವರು ಪೊಲೀಸ್​ ಅಧಿಕಾರಿಗಳನ್ನ ಕರ್ತವ್ಯದಿಂದ ಅಮಾನತು ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ತಿರುಚಿ ಉಪ ಪೊಲೀಸ್ ಮಹಾನಿರೀಕ್ಷಕರಾದ ಪಿ ಪಕಲವನ್, ಬಂಧಿತ ನಾಲ್ವರು ಆರೋಪಿಗಳು ಮದ್ಯಪಾನ ಸೇವಿಸಲು ಉದ್ಯಾನವನ ಒಂದಕ್ಕೆ ತೆರಳಿದ್ದಾರೆ. ಈ ವೇಳೆ ಅಲ್ಲಿ ಅಪ್ರಾಪ್ತ ವಯಸ್ಕಳು ಹಾಗೂ ಆಕೆಯ ಸ್ನೇಹಿತ ಇರುವುದನ್ನು ಗಮನಿಸಿದ ಆರೋಪಿಗಳು, ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಬಲವಂತವಾಗಿ ಕಾರಿನಲ್ಲಿ ಬೇರೊಂದು ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ:ನಮ್ಮ ಮೆಟ್ರೋದಲ್ಲಿ ಮಿತಿಮೀರಿದ ರೀಲ್ಸ್​ ಗೀಳು; ಯೂಟ್ಯೂಬರ್ ಪ್ರ್ಯಾಂಕ್ ವಿಡಿಯೋಗೆ ಗಾಬರಿಗೊಂಡ ಪ್ರಯಾಣಿಕರು
ಬಳಿಕ ನಾಲ್ವರು ಆರೋಪಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಕೃತ್ಯವನ್ನು ತಮ್ಮ ಮೊಬೈಲ್​ ಫೋನಿನಲ್ಲಿ ಚಿತ್ರೀಕರಿಸಿ ನಡೆದ ವಿಚಾರವನ್ನು ಹೊರಗಡೆ ಬಾಯ್ಬಿಟ್ಟರೆ ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಪರಾರಿಯಾಗಿದ್ದಾರೆ. ಕೂಡಲೇ ಎಚ್ಚೆತ್ತ ಸಂತ್ರಸ್ತೆ ಹತ್ತಿರದಲ್ಲಿದ್ದ ಪೊಲೀಸ್​ ಠಾಣೆಗೆ ತೆರಳಿ ನಡೆದ ಘಟನೆಯನ್ನು ವಿವರಿಸಿ ದೂರು ದಾಖಲಿಸಿದ್ದಾಳೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ವರದಿ ಮೂಲಕ ತಿಳಿದು ಬಂದಿದೆ. ಪ್ರಕರಣದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ನಾಲ್ವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿರುಚಿ ಉಪ ಪೊಲೀಸ್ ಮಹಾನಿರೀಕ್ಷಕರಾದ ಪಿ ಪಕಲವನ್ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 6 =
Remember me
