ಪಂಜಾಬ್:ವೇಗವಾಗಿ ಚಲಿಸುತ್ತಿದ್ದ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ (ಜ.27) ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಜಮ್ಮು-ಜಲಂಧರ್ ರಾಷ್ಟ್ರೀಯ ರಾಜ್ಯ ಹೆದ್ದಾರಿಯಲ್ಲಿ ಎರಡೂ ವಾಹನಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದಿದೆ.
ಇದನ್ನೂ ಓದಿ:ಜಾಹೀರಾತಿನಲ್ಲಿ ಕಾಣಿಸಿಕೊಂಡ ಡಿವೈನ್‌ ಸ್ಟಾರ್: ರಾಮ್ ರಾಜ್ ಕಾಟನ್ ಸಂಸ್ಥೆಗೆ ಬ್ರ್ಯಾಂಡ್ ಅಂಬಾಸಿಡರ್ ಆದ ರಿಷಬ್ ಶೆಟ್ರು
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಾಯಾಳುಗಳನ್ನು ದಾಸುಹಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಮೃತಸರ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಘಟನೆ ಕಂಡ ಪ್ರತ್ಯಕ್ಷದರ್ಶಿಗಳು, “ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿತು. ಅದನ್ನು ನಾವು ಕಣ್ಣಾರೆ ಕಂಡೆವು. ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ವಿಷಯವನ್ನು ತಕ್ಷಣ ಪೊಲೀಸರಿಗೆ ತಿಳಿಸಿದೆವು ಎಂದು ಹೇಳಿದ್ದಾರೆ.
ನಾಲ್ಕು ಜನರು ಮೃತಪಟ್ಟಿರುವುದು ದೃಢಪಟ್ಟಿದೆ. ಆದರೆ ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿತ್ತು, ಅವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು. ಎರಡೂ ವಾಹನಗಳು ವಿರುದ್ಧ ದಿಕ್ಕಿನಿಂದ ಬರುತ್ತಿದ್ದವು. ಕಾರು ಸಿಎನ್‌ಜಿಯಲ್ಲಿ ಓಡುತ್ತಿದ್ದ ಕಾರಣ ಡಿಕ್ಕಿ ಹೊಡೆದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ,(ಏಜೆನ್ಸೀಸ್).
ವಿಭೀಷಣ ಪಾತ್ರಕ್ಕೆ ನೀವೇ ಬೇಕು ಎಂದ ನಿರ್ದೇಶಕರು! ಅಷ್ಟಕ್ಕೂ ಆ ಸ್ಟಾರ್​ ನಟ ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
