ಬುಲಂದ್‌ಶಹರ್:ಸರ್ಕಾರಿ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ:ಮಗ-ಸೊಸೆ ನಡುವೆ ಮನಸ್ತಾಪ: ಮೊಮ್ಮಗನ ಪ್ರಾಣ ತೆಗೆದ ಅಜ್ಜ..
ಮೃತರ ಗುರುತು ಪತ್ತೆಗೆ ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದ್ದು, ಕೊತ್ವಾಲಿ ದೇಹತ್ ಪ್ರದೇಶದ ಅಡೌಲಿ ಟ್ರಿಸೆಕ್ಷನ್ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ದೆಹಲಿಗೆ ತೆರಳುತ್ತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಬಸ್‌ನ ಹಿಂದಿನ ಭಾಗಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ, ಅದರಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಟ್ರಕ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Disturbing visual
बुलन्दशहर में ट्रक और रोडवेज बस की भिड़ंत में 4 लोगों की मौत, 1 दर्जन से ज़्यादा लोग घायल. बदायूँ से दिल्ली जा रही थी साहिबाबाद डिपो की बस, घटना का CCTV आया सामने.pic.twitter.com/gHFV4JrLsR
— Utkarsh Singh (@UtkarshSingh_)August 11, 2023
ಇನ್ನು ಈ ಭೀಕರ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತವಾದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಪೊಲೀಸರು, ಮೃತದೇಹಗಳನ್ನು ವಶಕ್ಕೆ ಪಡೆದು ಅಪಘಾತದಲ್ಲಿ ಗಾಯಗೊಂಡಿರುವ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
