ಲಖನೌ:ಉತ್ತರ ಪ್ರದೇಶದ ಇಟಾವಾದ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ದೆಹಲಿಯಿಂದ ಹಮೀರ್‌ಪಿರ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ಮಾತನಾಡಿರುವ ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯ ಶ್ಯಾಮ್​ ಪ್ರಸಾದ್​, ಇಟಾವಾಹ್‌ನ ಇಕ್ದಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕ ನಿದ್ರೆಗೆ ಜಾರಿದದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಗುರುತನ್ನು ಪತ್ತೆಹಚ್ಚುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಚಾಲಕನಿಗೆ ನಿದ್ದೆಯಲ್ಲಿದ್ದ ಕಾರಣ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
#WATCH| Etawah, Uttar Pradesh: Dr. Shyam Mohan, District Hospital Emergency says "Under Etawah's Ikdil Police Station area, a truck collided with a car. Four people of the same family died in the accident and two others were injured. They were going from Delhi to Hamirpur in a…pic.twitter.com/ipzkucZ0KI
#Etawah: कानपुर हाईवे पर इटावा के इकदिल में हुआ बड़ा हादसाकार चालक को नींद आने से आगे खड़े ट्रक से टकराई कारहादसे में एक ही परिवार के 4 लोगों की हुई दर्दनाक मौत2 बच्चे और 1 महिला घायल,घायलों को अस्पताल मे कराया गया भर्ती@etawahpolice@Uppolice#Etawahpic.twitter.com/QXyZmqDz5r
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
