ಮುಂಬೈ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200ಅಡಿ ಕಂದಕಕ್ಕೆ ಉರುಳಿದ ಪರಿಣಾಮ ತೆಲಂಗಾಣ ಮೂಲದ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಮರಾವತಿ-ಚಿಕಲ್ದಾರ ನಡುವಿನ ಮಡ್ಕಿ ಎಂಬ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದುರ್ದೈವಿಗಳು ತೆಲಂಗಾಣದ ಆದಿಲಾಬಾದ್​ ನಿವಾಸಿಗಳು ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಚೈತ್ರಾ ಕುಂದಾಪುರ ಪ್ರಕರಣ; ಬಂಧಿತ ಗಗನ್​ಗೂ ನಮಗೂ ಯಾವುದೇ ಸಂಬಂಧವಿಲ್ಲ: ಸಾಲುಮರದ ತಿಮ್ಮಕ್ಕ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಅಪಘಾತ ಬೆಳಗಿನ ಜಾವದಲ್ಲಿ ಸಂಭವಿಸಿದ್ದು, ದಟ್ಟ ಮಂಜಿನಿಂದಾಗಿ ಮುಂಬದಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ. 200ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಶೇಖ್​ ಸಲ್ಮಾನ್​ ಶೇಖ್​ ಚಾಂದ್​ (28), ಶಿವಕೃಷ್ಣ ಆಡಂಕಿ (30), ಲಕ್ಷ್ಮಣ್​ ಗುಲ್ಲಿ (29), ವಾನಪ್ರತಿ ಕೋಟೇಶ್ವರ ರಾವ್​ (27) ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೆ. ಶ್ಯಾಮಲಿಂಗ ರೆಡ್ಡಿ (29), ಯೋಗೇಶ್​ ಯಾದವ್ (30), ಹರೀಶ್​ ಮುಟ್ಟಿನೇನಿ (27, ಸುಮನ್​ ಕತಿಕಾ (29) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ತೆಲಂಗಾಣದ ಆದಿಲಾಬಾದ್​ ನಿವಾಸಿಗಳಾಗಿದ್ದು, ತೆಲಂಗಾಣ ಗ್ರಾಮೀಣ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
