ಉತ್ತರಾಖಂಡ:ಕಳೆದ ಕೆಲ ದಿನಗಳಿಂದ ಉತ್ತರ ಭಾರತದ ಹಲವು ಕಡೆ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಮಳೆಯಿಂದ ಉತ್ತರಾಖಂಢ ತತ್ತರಿಸಿ ಹೋಗಿದೆ. ಮಳೆಯಿಂದಾಗಿ ಸಂಭವಿಸಿದ ಭೂ ಕುಸಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ಕು ತಿಂಗಳ ಹಸುಗೂಸು ಮೃತಪಟ್ಟಿದೆ.
ಘಟನೆಯೂ ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ನಡೆದಿದ್ದು, ಮೂವರ ಮೃತದೇಹಗಳು ಅವಶೇಷಗಳಡಿ ಸಿಲುಕಿದ್ದ ಕಾರೊಂದರಲ್ಲಿ ಪತ್ತೆಯಾಗಿತ್ತು ಎಂದು ರಕ್ಷಣಾ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಗೋಮುಖ ವ್ಯಾಘ್ರಗಳ ಮೈತ್ರಿಗಾಗಿ ರೈತರ ಹಕ್ಕನ್ನು ಅಡವಿಟ್ಟಿದ್ದು ದುರಂತ: ನಳಿನ್​ ಕುಮಾರ್​ ಕಟೀಲ್​
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ತೆಹ್ರಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನವನೀತ್​ ಸಿಂಗ್​ ಭುಲ್ಲರ್​ ಭಾನುವಾರ ಹಾಗೂ ಸೋಮವಾರ ನಿರಂತರವಾಗಿ ಮಳೆಯಾದ ಪರಿಣಾಮ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಚಂಬಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿರುವ ಟ್ಯಾಕ್ಸಿ ಸ್ಟ್ಯಾಂಡ್​ನಲ್ಲಿ ದುರ್ಘಟನೆ ಸಂಭವಿಸಿದ್ದು, ಅವಶೇಷಗಳಡಿ ಮತ್ತಷ್ಟು ಜನರು ಸಿಲುಕಿರುವ ಬಗ್ಗೆ ಮಾಹಿತಿ ದೊರೆತಿದೆ.
ಪೂನಂ ಖಂಡೂರಿ, ಸರಸ್ವತಿ ದೇವಿ ಹಾಗು ನಾಲ್ಕು ತಿಂಗಳ ಗಂಡು ಮಗು ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ತಂಡ(SDRF)ದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಭೂಕುಸಿತ ಉಂಟಾಗಿರುವುದರಿಂದ ತೆಹ್ರಿ ಹಾಗೂ ಚಂಬಾ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನವೀನ್​ ಸಿಂಗ್​​ ಭುಲ್ಲಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 2 =
Remember me
