ರಜೌರಿ:ಅಂತ್ಯಕ್ರಿಯೆ ಮುಗಿಸಿ ಮನೆಗೆ ಹೊರಟವರು ಸೇರಿದ್ದು ಮಸಣಕ್ಕೆ ಸೇರಿದ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಥಾನಮಂಡಿ ಪ್ರದೇಶದಲ್ಲಿ ನಡೆದಿದೆ.ಮೃತರನ್ನು ಭಂಗೈ ನಿವಾಸಿಗಳಾದ ಶಮೀಮ್ ಅಖ್ತರ್ (55), ರುಬಿನಾ ಕೌಸರ್ (35), ಜರೀನಾ ಬೇಗಂ ಮತ್ತು ಮೊಹಮ್ಮದ್ ಯೂನಿಸ್ (38) ಎಂದು ಗುರುತಿಸಲಾಗಿದೆ. ಗಾಯಾಳುಗಳು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ:ಸಿದ್ದರಾಮಯ್ಯ ಜನತಾ ಪಕ್ಷದಲ್ಲಿ ಇದ್ದಾಗಿನಿಂದಲೂ ಮೊಂಡಾಟ ಆಡುತ್ತಿದ್ದಾರೆ: ಸಿ.ಟಿ. ರವಿ
ಬುಧವಾರ ಮುಂಜಾನೆ ಸಂತ್ರಸ್ತರೆಲ್ಲರೂ ಪೂಂಚ್​​ನಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಭಂಗೈ ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದರು ಈ ವೇಳೆ ಸಂತ್ರಸ್ತರು ತೆರಳುತ್ತಿದ್ದ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ವಾಹನದಲ್ಲಿ ಒಟ್ಟು ಹನ್ನೆರಡು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತದ ನಂತರ ಎಲ್ಲರನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿ ಥಾನಮಂಡಿಯ ಉಪ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 14 =
Remember me
