ಝಾನ್ಸಿ:ಮಾರುಕಟ್ಟೆಯ ಕಟ್ಟಡವೊಂದರಲ್ಲಿ ಏಕಾ-ಏಕಿ ಬೆಂಕಿ ಕಾಣಿಸಿಕೊಂಡು ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಶೋರೂಮ್​ವೊಂದರಲ್ಲಿ ನಡೆದಿದೆ.
ಇದನ್ನೂ ಓದಿ:ನೇಮಕಾತಿ ನಡೆದು ತಿಂಗಳುಗಳೇ ಕಳೆದರೂ ಕೈಸೇರದ ನೇಮಕಾತಿ ಆದೇಶ: ಸರ್ಕಾರದ ವಿರುದ್ಧ ಭಾವಿ ಶಿಕ್ಷಕರ ಪ್ರತಿಭಟನೆ
ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ. ಸಿಪ್ರಿ ಬಜಾರ್‌ನ ವಿಆರ್ ಟ್ರೇಡರ್ಸ್​ನಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಶೋ ರೂಮ್​ನ ಮೊದಲ ಮಹಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಸ್ವಲ್ಪ ಸಮಯದಲ್ಲೇ ಬೆಂಕಿಯು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಎಸಿ, ಟಿವಿ, ಫ್ರಿಡ್ಜ್, ಮೊಬೈಲ್ ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿವೆ. ನಂತರ ಬೆಂಕಿಯು ಎರಡನೇ ಮಹಡಿಯನ್ನು ತಲುಪಿ ಕಾಲ್ತುಳಿತ ಉಂಟಾಗಿದೆ.
ಈ ವೇಳೆ ಕೆಲವರು ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದಿದ್ದಾರೆ. ಇದರ ಪರಿಣಾಮವಾಗಿ ಇಬ್ಬರು ಗಾಯಗೊಂಡಿದ್ದಾರೆ. ನಂತರ ಮೂರನೇ ಮಹಡಿಯಲ್ಲಿರುವ ಯುನೈಟೆಡ್ ಇನ್ಶೂರೆನ್ಸ್ ಕಂಪನಿಯ ಕಚೇರಿಗೆ ಬೆಂಕಿ ತಗುಲಿದ್ದು,. ಈ ಕಚೇರಿಯೂ ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿ:ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ಶ್ವಾನವನ್ನು ಪತ್ತೆಹಚ್ಚಿ!
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳ ಸುಮಾರು 10 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಸತ್ತವರ ಮೃತದೇಹ ಹೊರತೆಗೆದಿದ್ದಾರೆ. ಝಾನ್ಸಿ ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 17 =
Remember me
