ಅಹಮದಾಬಾದ್:ಖಾಸಗಿ ಕಂಪನಿಗೆ ಸೇರಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಮತ್ತೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಗುಜರಾತ್​ನ ಪಂಚಮಹಲ್​ ಜಿಲ್ಲೆಯ ದಾಹೋಡ್​-ಗೋಧ್ರಾ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೋಧ್ರಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರವೀಣ್​​ಸಿನ್​ ಜಯತಾವತ್, ಘಟನೆಯು ಪಂಚಮಹಲ್​ ಜಿಲ್ಲೆಯ ದಾಹೋಡ್​-ಗೋಧ್ರಾ ಹೆದ್ದಾರಿಯಲ್ಲಿ ನಡೆದಿದೆ. ಇಂದೋರ್​ನತ್ತ ತೆರಳುತ್ತಿದ್ದ ಬಸ್​ ಕೆಟ್ಟು ರಸ್ತೆಬದಿಯಲ್ಲಿ ಅದರ ರಿಪೇರಿ ಕಾರ್ಯ ನಡೆಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ದಾಹೊಡ್​ನಿಂದ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಮತ್ತೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಗೋಧ್ರಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರವೀಣ್​​ಸಿನ್​ ಜಯತಾವತ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
