ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿ ಥಳಿಸಿದ್ದರಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ: 41 ವಿಷಯಗಳಲ್ಲಿ 6,675 ಮಂದಿ ಅರ್ಹ
ಮಂಗಳವಾರ ರಾತ್ರಿ ಸೇನಾ ಸಿಬ್ಬಂದಿ ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ ಎನ್ನಲಾಗಿದೆ. ಕುಪ್ವರಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್​ ಅಧಿಕಾರಿಗಳಾದ ರಯೀಸ್ ಖಾನ್​, ಇಮ್ತಿಯಾಜ್ ಮಲಿಕ್​ ಸೇರಿದಂತೆ ಕಾನ್​ಸ್ಟೆಬಲ್​​ಗಳಾದ ಸಲೀಮ್​ ಮುಷ್ತಾಕ್​, ಜಹೂರ್ ಅಹಮದ್​ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡಿರುವ ಪೊಲೀಸ್ ಅಧಿಕಾರಿಗಳನ್ನು ಸೌರಾದ ಎಸ್‌ಕೆಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಕುಪ್ವಾರದ ಬಟ್​ಪೋರಾದಲ್ಲಿರುವ ಸ್ಥಳೀಯ ಪ್ರಾದೇಶಿಕ ಸೇನಾಧಿಕಾರಿಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಸೇನಾ ಸಿಬ್ಬಂದಿಯು ಪೊಲೀಸ್​ ಠಾಣೆಗೆ ನುಗ್ಗಿ ಪೊಲೀಸರನ್ನು ಥಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದ ನಂತರ ಪ್ರತಿಕ್ರಿಯಿಸುವುದಾಗಿ ಶ್ರೀನಗರ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಅಂಬಾನಿಯಂತಹ ಕೈಗಾರಿಕೋದ್ಯಮಿಗಳಿಗೆ ನೆರವಾಗಲು ಮೋದಿಯವರನ್ನು ‘ದೇವರೇ ಕಳಿಸಿದ್ದಾರೆ’: ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
