ಲಖನೌ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ.
ಸೋಮವಾರ ತಡರಾತ್ರಿ ಬಿಲಹೌರ್-ಕತ್ರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಸಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹರ್ದೋಯಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದುರ್ಗೇಶ್​ ಕುಮಾರ್ ಸಿಂಗ್, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಹರ್ದೋಯಿಯ ಬರಕಾಂತ್ ಗ್ರಾಮದಿಂದ ನಾಯಗಾಂವ್ ಕಡೆಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ಧಾರೆ. ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹರ್ದೋಯಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದುರ್ಗೇಶ್​ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
#WATCH| Hardoi, UP: Five people of the same family died when their vehicle lost control on the Bilhaur-Katra highway and hit a tree.Durgesh Kumar Singh (SP, Hardoi) says, "A total of four persons and a four-year-old child were going from Barakanth village to Nayagaon in a…pic.twitter.com/fBfUG0FkGV
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 20 =
Remember me
