ಬಿಹಾರ:ರಸ್ತೆಯಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನ ಮೇಲೆ ಹೈಟೆನ್ಷನ್ ತಂತಿ ತುಂಡಾಗಿ ಬಿದ್ದ ಪರಿಣಾಮ, ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತಪಟ್ಟ ಘಟನೆ ಬಿಹಾರದ ಕತಿಹಾರ್‌ನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಮನಃಪರಿವರ್ತನೆಯಿಂದ ಜೀವನದಲ್ಲಿ ನೆಮ್ಮದಿ
ಘಟನೆ ಸಂಭವಿಸಿದ ಬೆನ್ನಲ್ಲೇ ಸ್ಥಳೀಯರು ಮತ್ತು ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ವಿದ್ಯುತ್​ ಇಲಾಖೆಯ ಬೇಜವಾಬ್ದಾರಿಯೇ ತಮ್ಮ ಪುತ್ರನ ಸಾವಿಗೆ ಕಾರಣ ಎಂದು ಬಾಲಕನ ತಂದೆ-ತಾಯಿ ಆರೋಪಿಸಿದ್ದಾರೆ.
ಅನೇಕ ಬಾರಿ ಹೈಟೆನ್ಷನ್​ ತಂತಿ ರಸ್ತೆಗೆ ಬಿದ್ದಿದೆ. ಈ ಬಗ್ಗೆ ಎಷ್ಟು ಬಾರಿ ದೂರು ನೀಡಿದರೂ ಎಚ್ಚೆತ್ತುಕೊಳ್ಳದ ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನವೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಮತ್ತು ಬಾಲಕನ ಸಂಬಂಧಿಕರು ಆರೋಪಿಸಿದ್ದಾರೆ. ಘಟನೆಯಿಂದ ತೀವ್ರ ಕೆರಳಿದ ಸ್ಥಳೀಯರು, ಕತಿಹಾರ್-ಕೋಧಾ ರಾಷ್ಟ್ರೀಯ ಹೆದ್ದಾರಿ 81 ರಲ್ಲಿ ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:ಆಸೆ ಈಡೇರಿಸದ ಶಿವನ ಮೇಲೆ ಕೋಪಗೊಂಡ ಯುವಕ, ದೇವಸ್ಥಾನದಲ್ಲಿದ್ದ ಶಿವಲಿಂಗವನ್ನೇ ಕದ್ದ!
ಪರಿಹಾರ ನೀಡುವಂತೆ ಒತ್ತಾಯಿಸಿದ ಪೋಷಕರು, ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಆಗ್ರಹಿಸಿದರು. ಕೂಡಲೇ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕುಟುಂಬಸ್ಥರ ಮನವಿಗೆ ಸ್ಪಂದಿಸಿದ ಸರಕಾರ, ಪರಿಹಾರ ನೀಡುವುದಾಗಿ ಭರವಸೆ ನೀಡುವುದರ ಜತೆಗೆ ದೋಷಪೂರಿತ ವಿದ್ಯುತ್ ತಂತಿ ವ್ಯವಸ್ಥೆಯನ್ನು ವಿಳಂಬ ಮಾಡದೆ ಸರಿಪಡಿಸುವುದಾಗಿ ತಿಳಿಸಿತು,(ಏಜೆನ್ಸೀಸ್).
ಮುದ್ದು ಕೃಷ್ಣನಾದ ನಿಖಿಲ್​ ಕುಮಾರಸ್ವಾಮಿ ಪುತ್ರ; ಇಲ್ಲಿವೆ ನೋಡಿ ಫೋಟೋಸ್​

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:14 + nine =
Remember me
