ಲಖನೌ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಯೂಟ್ಯೂಬರ್ಸ್​ ದುರಂತ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ನಡೆದಿದೆ. ಈ ಅವಘಡದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಲಕ್ಕಿ, ಸಲ್ಮಾನ್​, ಶಾರುಖ್​ ಮತ್ತು ಶಹನವಾಜ್ ಎಂದು ಗುರುತಿಸಲಾಗಿದೆ. ರೌಂಡ್​ 2 ವರ್ಲ್ಡ್​ (Round 2 World ) ಹೆಸರಿನ ಯೂಟ್ಯೂಬ್​ ಚಾನೆಲ್​ನಲ್ಲಿ ಕಾಮಿಡಿ ವಿಡಿಯೋಗಳನ್ನು ಪೋಸ್ಟ್​ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿರುತ್ತಿದ್ದರು.
ಹುಟ್ಟುಹಬ್ಬದ ಆಚರಣೆ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬರುತ್ತಿದ್ದ ಬೊಲೆರೊ ಕಾರಿಗೆ ಯೂಟ್ಯೂಬರ್ಸ್ ಇದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಜನರು, ಯುವಕರನ್ನು ಸಿಎಚ್‌ಸಿ ಗಜರೌಲಾ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಮ್ರೋಹಾ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದ್ದು, ಅಪಘಾತದ ಸ್ಥಳವನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.(ಏಜೆನ್ಸೀಸ್​)
ಪ್ರತಿದಿನವೂ ಚಿಕನ್ ತಿನ್ನಬಾರದು ಯಾಕೆ ಗೊತ್ತಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಪಂದ್ಯ ಸೋತಿದ್ದಕ್ಕೆ ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್​ ಆಟಗಾರ​! ಮೆಚ್ಚುಗೆಗೆ ಪಾತ್ರವಾಯ್ತು ರೋಹಿತ್ ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
