ಅಸ್ಸಾಂ:ತಿಥಿ ಕಾರ್ಯವೊಂದರ ಊಟ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಜನರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯಲ್ಲಿ ನಡೆದಿದೆ.
ಗೋಲ್ಪಾರಾ ಜಿಲ್ಲೆಯ ಮರಿಯಂಪುರ ಪ್ರದೇಶದಲ್ಲಿ ನಡೆದ ಮರಣಾನಂತರದ ಧಾರ್ಮಿಕ ( ತಿಥಿ ಕಾರ್ಯ) ಕಾರ್ಯಕ್ರಮವೊಂದರಲ್ಲಿ ಆಹಾರ ಪದಾರ್ಥಗಳನ್ನು ಸೇವಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಜನರು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ರಂಗಜುಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ತನ್ನ ದೇಹದ ಭಾಗವನ್ನೇ ಬೇಯಿಸಿ ಬಾಯ್​​ಫ್ರೆಂಡ್​ಗೆ ತಿನ್ನಿಸಿದ ಯುವತಿ!
ವಿಷಪೂರಿತ ಆಹಾರ ಸೇವಿಸಿದ ನಂತರ ಹೀಗಾಗಿದೆ ಎಂದು ಶಂಕಿಸಲಾಗಿದೆ. ಆದರೆ ಜನರ ಅನಾರೋಗ್ಯಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ:ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; 15 ನಿಮಿಷ ಕಾದಾಡಿ ಜೀವ ಉಳಿಸಿಕೊಂಡ!
“ತಿಥಿ ಕಾರ್ಯಕ್ರಮಕ್ಕೆ ಬಂದಿದ್ದವರು ಇತರ ಆಹಾರದ ಜೊತೆಗೆ ಮೀನುಗಳನ್ನು ಸೇವಿಸಿದ್ದಾರೆ” ಎಂದು ಕುಟುಂಬ ಸದಸ್ಯರು ತಿಳಿಸಿದರು. ನಿಜವಾದ ಕಾರಣ ಇನ್ನೂ ಪತ್ತೆಯಾಗಿಲ್ಲ, ಆದಾಗ್ಯೂ, ಇದು ಆಹಾರ ವಿಷಕಾರಿ ಪ್ರಕರಣ ಎಂದು ತೋರುತ್ತದೆ. ಈವರೆಗೆ 20-25 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇನ್ನೂ ಹಲವು ಅಸ್ವಸ್ಥರು ಬರುತ್ತಿದ್ದಾರೆ. ಈಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಂಗಜುಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ತಿಳಿಸಿದ್ದಾರೆ.
ಈ ರಸ ಕುಡಿದರೆ ಹೊಳೆಯುವ ಚರ್ಮ ಸಿಗುತ್ತದೆ! ಏನಿದು ABC ಜ್ಯೂಸ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 10 =
Remember me
