ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಾಹ್ನ 4 ಗಂಟೆ ಹೊತ್ತಿಗೆ ಶೇ.42.20ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈಗಾಗಲೇ ಹಲವು ಪ್ರಮುಖ ನಾಯಕರು ತಮ್ಮ ಮತ ಚಲಾಯಿಸಿದ್ದಾರೆ. ಮಧ್ಯಾಹ್ನ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ, ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಅವರ ಪುತ್ರ ಮತ್ತಿತರ ಮುಖಂಡರು ವೋಟ್​ ಮಾಡಿದ್ದಾರೆ.
ದೆಹಲಿಯಾದ್ಯಂತ ಬಿಗಿ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಯುತ್ತಿರುವ ಶಾಹೀನ್​ ಬಾಗ್​ ನ ಬೂತ್​ನಲ್ಲಿ ವಿಶೇಷ ಭದ್ರತೆ ವಹಿಸಲಾಗಿದೆ.ದೆಹಲಿಯಾದ್ಯಂತ 40,000 ಪೊಲೀಸ್​ ಸಿಬ್ಬಂದಿ, 19,000 ಹೋಂಗಾರ್ಡ್ಸ್​ ಹಾಗೂ 190 ಕಂಪನಿ ಪ್ಯಾರಾಮಿಲಿಟರಿ ಪಡೆಗಳನ್ನು ನಿಯೋಜಿಸಲಾಗಿದೆ.
ಯಮುನಾ ನದಿಯಲ್ಲಿ ಪೊಲೀಸ್ ದೋಣಿಗಳು ಗಸ್ತು ತಿರುಗುತ್ತಿವೆ. ಫ್ಲೈಯಿಂಗ್​ ಸ್ಕ್ವಾಡ್​ಗಳೂ ಕಾರ್ಯನಿರ್ವಹಿಸುತ್ತಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − four =
Remember me
