ನವದೆಹಲಿ:ಬೊಕಿಯೊ ಪ್ರಾಂತ್ಯದ ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್ (SEZ) ನಲ್ಲಿರುವ ಸೈಬರ್ ಹಗರಣ ಕೇಂದ್ರಗಳಲ್ಲಿ ಸಿಕ್ಕಿಬಿದ್ದಿದ್ದ 47 ಭಾರತೀಯರನ್ನು ರಕ್ಷಸಿರುವುದಾಗಿ ಲಾವೋಸ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶನಿವಾರ(ಆಗಸ್ಟ್​​ 31) ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾರತೀಯ ಪ್ರಜೆಗಳಿಗೆ ಲಾವೋಸ್ ಮತ್ತು ಕಾಂಬೋಡಿಯಾದಿಂದ ನೀಡುವ ಉದ್ಯೋಗದ ಆಫರ್‌ಗಳ ಬಗ್ಗೆ ಜಾಗರೂಕರಾಗಿರುವಂತೆ ಎಚ್ಚರಿಸಿದೆ. ಹಗರಣಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಎಚ್ಚರಿಕೆಯಿಂದ ಪರಿಶೀಲಿಸುವಂತೆ ಸೂಚಿಸಿದೆ.
ಇದನ್ನು ಓದಿ:ಅ.5ಕ್ಕೆ ಹರಿಯಾಣ ವಿಧಾನಸಭಾ ಚುನಾವಣೆ ಮತದಾನ ಮುಂದೂಡಿಕೆ; ಚುನಾವಣಾ ಆಯೋಗ ಕೊಟ್ಟ ಕಾರಣ ಹೀಗಿದೆ…
ಬೊಕಿಯಾ ಪ್ರಾಂತ್ಯದ ಗೋಲ್ಡನ್ ಟ್ರಯಾಂಗಲ್ ವಿಶೇಷ ಆರ್ಥಿಕ ವಲಯ (SEZ) ವ್ಯಾಪ್ತಿಯಲ್ಲಿ ಸೈಬರ್ ಹಗರಣ ಕೇಂದ್ರಗಳಲ್ಲಿ ಸಿಕ್ಕಿಬಿದ್ದ 47 ಭಾರತೀಯರನ್ನು ರಾಯಭಾರ ಕಚೇರಿ ರಕ್ಷಿಸಿದೆ. ಗೋಲ್ಡನ್ ಟ್ರಯಾಂಗಲ್ SEZ ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ಅವರ ಶಿಸ್ತುಕ್ರಮದ ನಂತರ ಲಾವೋಸ್ ಅಧಿಕಾರಿಗಳು 29 ಮಂದಿಯನ್ನ ರಾಯಭಾರ ಕಚೇರಿಗೆ ಹಸ್ತಾಂತರಿಸಿದ್ದಾರೆ. ಆದರೆ ಇತರ 18 ಜನರು ಸಹಾಯ ಕೋರಿ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾಗಿ ಲಾವೋಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​​ನಲ್ಲಿ ತಿಳಿಸಿದೆ.
Embassy of India successfully rescues 47 Indians trapped in cyberscam centres in Golden Triangle SEZ of Lao PDR. Detailed press release below:pic.twitter.com/Ap4BTJYP7c
ವಂಚಕರು ಜನರನ್ನು ಆಕರ್ಷಿಸುವ ಸಲುವಾಗಿ ಡೇಟಿಂಗ್​ ಆ್ಯಪ್​ನಲ್ಲಿ ಮಹಿಳೆಯರಂತೆ ಚಾಟ್ ಮಾಡುತ್ತಾರೆ. ಬಳಿಕ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ಎಷ್ಟೆಲ್ಲಾ ಆದಾಯ ಎಂಬುದರ ಬಗ್ಗೆ ಬ್ರೈನ್​ವಾಷ್​​ ಮಾಡುತ್ತಾರೆ. ಭಾರತದಲ್ಲಿ ಅನೇಕರನ್ನು ಈ ರೀತಿ ವಂಚಿಸಲಾಗಿದೆ ಎಂದು ರಕ್ಷಿಸಲ್ಪಟ್ಟ ಭಾರತೀಯರಲ್ಲಿ ಒಬ್ಬರು ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.
ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ರಾಜಧಾನಿ ವಿಯೆಂಟಿಯಾನ್‌ನಿಂದ ಬೋಕಿಯೊಗೆ ಸ್ಥಳೀಯ ಅಧಿಕಾರಿಗಳೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ತೆರಳಿದರು. ಲಾವೋಸ್‌ನಲ್ಲಿರುವ ಭಾರತೀಯ ರಾಯಭಾರಿಯಾಗಿರುವ ಪ್ರಶಾಂತ್ ಅಗರವಾಲ್ ಅವರು ಪಾರಾದ ತಂಡವನ್ನು ಭೇಟಿಯಾಗಿ ಅವರು ಎದುರಿಸಿದ ಸವಾಲುಗಳನ್ನು ಚರ್ಚಿಸಲು ಮತ್ತು ಮುಂದಿನ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ರಾಯಭಾರ ಕಚೇರಿಯು ಲಾವೋಸ್ ಅಧಿಕಾರಿಗಳೊಂದಿಗೆ ರಕ್ಷಿಸಲ್ಪಟ್ಟವರನ್ನು ಭಾರತಕ್ಕೆ ಕಳುಹಿಸಲು ಮಾಡಬೇಕಾದ ಕ್ರಮಗಳನ್ನು ಪೂರ್ಣಗೊಳಿಸಿದೆ. ರಕ್ಷಿಸಲ್ಪಟ್ಟವರಲ್ಲಿ 30 ಮಂದಿ ಈಗಾಗಲೇ ಭಾರತಕ್ಕೆ ಕಳುಹಿಸಲಾಗಿದೆ.ಉಳಿದ 17 ಮಂದಿ ಅಂತಿಮ ಪ್ರಯಾಣದ ವ್ಯವಸ್ಥೆಗಾಗಿ ಕಾಯುತ್ತಿದ್ದು ಅವರು ಶೀಘ್ರದಲ್ಲೇ ಹೊರಡಲಿದ್ದಾರೆ ಎಂದು ರಾಯಭಾರಿ ಕಚೇರಿ ತಿಳಿಸಿದೆ. (ಏಜೆನ್ಸೀಸ್​​)
ಹೃದಯಾಘಾತಕ್ಕೆ ಮಲಬದ್ಧತೆ ಸಮಸ್ಯೆಯೂ ಒಂದು ಕಾರಣ; ಅಧ್ಯಯನದಿಂದ ಮಾಹಿತಿ ಬಹಿರಂಗ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − three =
Remember me
