ನವದೆಹಲಿ:ಕೋವಿಡ್​-19 ಹೊಡೆತಕ್ಕೆ ಎಲ್ಲೆಡೆ ಜನರು ಕೆಲಸ ಕಳೆದುಕೊಂಡು ಕಂಗಾಲಾಗಿದ್ದು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲೇ ನಿರುದ್ಯೋಗಿಗಳಾಗಿದ್ದಾರೆ. ಇಂಥದ್ದೊಂದು ಆತಂಕದ ಪರಿಸ್ಥಿತಿ ನಡುವೆಯೇ ಕೇಂದ್ರ ಸರ್ಕಾರ ಆಶಾದಾಯಕ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ.
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಮತ್ತು ಎಂಎಸ್​ಎಂಇ ಸಚಿವ ನಿತಿನ್​ ಗಡ್ಕರಿ ಹೊಸ ಉದ್ಯೋಗಗಳ ಸೃಷ್ಟಿಯ ಕುರಿತ ವಿಷಯವನ್ನು ಪ್ರಸ್ತಾಪಿಸಿದ್ದು, ಇದೀಗ ದೇಶದ ಯುವಜನತೆಯ ಕಣ್ಣುಗಳನ್ನು ಅರಳಿಸಿದೆ. ಆಗ್ರೋವಿಷನ್​ ಫೌಂಡೇಷನ್ ಆಯೋಜಿಸಿದ್ದ ಅಗ್ರಿ-ಫುಡ್​ ಪ್ರೊಸೆಸಿಂಗ್ ಸಮ್ಮಿಟ್ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಬಳಿಕ ಗಡ್ಕರಿ ಈ ವಿಷಯ ತಿಳಿಸಿದರು.
ಗ್ರಾಮೀಣ ಉದ್ಯೋಗಗಳ ವಹಿವಾಟು ಸದ್ಯ 80 ಸಾವಿರ ಕೋಟಿ ರೂ. ಇದ್ದು, ಅದನ್ನು ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ.ಗೆ ಏರಿಸುವ ಗುರಿ ಇರಿಸಿಕೊಳ್ಳಲಾಗಿದೆ. ಈ ಮೂಲಕ ಐದು ಕೋಟಿ ಉದ್ಯೋಗಗಳನ್ನೂ ಸೃಷ್ಟಿಸಲಾಗುವುದು. ಗ್ರಾಮೀಣ ಹಾಗೂ ಕೃಷಿ ಕ್ಷೇತ್ರದಲ್ಲಿನ ಬೆಳವಣಿಗೆ ಮೂಲಕ ಈ ಗುರಿಯನ್ನು ಸಾಧಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. (ಏಜೆನ್ಸೀಸ್​)
ಪ್ರಣಬ್​ ಮುಖರ್ಜಿ ಮಕ್ಕಳ ನಡುವೆ ಕಿತ್ತಾಟ; ಕಾರಣ ಏನು ಗೊತ್ತಾ?

ಶಬರಿಮಲೆಯಲ್ಲಿಲ್ಲ ಈ ಸಲ ಪಂಪಾ ಸ್ನಾನ; ಹಾಗಾದರೆ ಮತ್ತೇನು ವ್ಯವಸ್ಥೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 1 =
Remember me
