ಭೋಪಾಲ್:ವೇಗವಾಗಿ ಬಂದ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಚಕ್ರಪಾಣಿ ತ್ರಿಪಾಠಿ, ಚಿತ್ರಕೂಟ ರೈಲು ನಿಲ್ದಾಣದಿಂದ ರಾಮಘಾಟ್ ಕಡೆಗೆ ಆಟೋ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಆಟೋಗೆ ಡಿಕ್ಕಿ ಹೊಡೆದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ನಡೆದ ವೇಳೆ ಆಟೋದಲ್ಲಿ 9 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಆಟೋವನ್ನು ಓವರ್​ಟೇಕ್​ ಮಾಡಲು ಹೋದಾಗ ಅಪಘಾತವಾಗಿದ್ದು, ಸ್ಥಳದಲ್ಲೇ ಐವರು ಪ್ರಾಣಬಿಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪ್ರಯಾಗ್​ರಾಜ್​ಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಚಕ್ರಪಾಣಿ ತ್ರಿಪಾಠಿ ತಿಳಿಸಿದ್ದಾರೆ.
#WATCH| ASP Chakrapani Tripathi says, "…The injured were immediately rushed to the hospital. But five of them died while three others were critically injured. They have been referred to Prayagraj. Out of the five deceased, three have been identified; the remaining two will be…https://t.co/VkUBGN5Caapic.twitter.com/G8I8c7U3uJ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eighteen =
Remember me
